ಇದೇ 8ಕ್ಕೆ ದೆಹಲಿಯಲ್ಲಿ ಸಂಸದರ ಸಭೆ
‘ವಿಧಾನ ಮಂಡಲ ಅಧಿವೇಶನದ ಮೊದಲ ದಿನ (ಡಿ. 8) ಸಂತಾಪ ಸೂಚನೆಯ ಬಳಿಕ ಕಲಾಪವು ಮಾರನೆ ದಿನಕ್ಕೆ ಮುಂದೂಡಿಕೆಯಾಗಬಹುದು. ಹೀಗಾಗಿ, ಅದೇ ದಿನ ರಾಜ್ಯದ ಸಂಸದರ ಸಭೆಯನ್ನು ದೆಹಲಿಯಲ್ಲಿ ಕರೆಯಲು ತೀರ್ಮಾನಿಸಿದ್ದೇವೆ’ ಎಂದು ಸಿದ್ದರಾಮಯ್ಯ ತಿಳಿಸಿದರು.
‘ದೆಹಲಿಗೆ ಹೋಗಿ ಸರ್ವಪಕ್ಷ ಸಂಸದರ ಸಭೆ ನಡೆಸುವ ಬಗ್ಗೆ ನಾವಿಬ್ಬರೂ ಚರ್ಚಿಸಿದ್ದೇವೆ. 8ರಂದು ದೆಹಲಿಗೆ ಹೋಗಿ, ಅಂದೇ ವಾಪಸ್ ಬರಲಿದ್ದೇವೆ. ಮೇಕೆದಾಟು, ಮೆಕ್ಕೆಜೋಳ ದರ, ಕೇಂದ್ರ ಸರ್ಕಾರದಿಂದ ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ನೀರಾವರಿ ಯೋಜನೆಗಳಿಗೆ ಅನುದಾನ ಬಾರದಿರುವ ವಿಚಾರ
ವಾಗಿ ಸಂಸದರ ಜತೆ ಚರ್ಚಿಸುತ್ತೇವೆ. ವಿಧಾನಸಭೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರನ್ನು ಮತ್ತು ಜೆಡಿಎಸ್ ನಾಯಕರನ್ನು ಸಭೆಗೆ ಕರೆದುಕೊಂಡು ಹೋಗಲು ತೀರ್ಮಾನಿಸಿದ್ದೇವೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.