ಹಿರಿಯೂರು: ‘ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ 3 ರಿಂದ ಶೇ 7ಕ್ಕೆ ಹೆಚ್ಚಿಸಿತ್ತು. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹೆಚ್ಚಿಸಿದ್ದ ಮೀಸಲಾತಿ ಆದೇಶವನ್ನು ಜಾರಿಗೊಳಿಸದೆ ಪರಿಶಿಷ್ಟ ಪಂಗಡದವರಿಗೆ ಅನ್ಯಾಯ ಮಾಡಿತು’ ಎಂದು ಕಾಡುಗೊಲ್ಲರ ಸಂಘದ ರಾಜ್ಯ ಘಟಕದ ಅಧ್ಯಕ್ಷ ರಾಜಣ್ಣ ಆರೋಪಿಸಿದರು.

ನಗರದ ವೇದಾವತಿ ಬಡಾವಣೆಯಲ್ಲಿರುವ ಏಕಲವ್ಯ ಬುಡಕಟ್ಟು ಜನರ ಸಹಕಾರ ಸಂಘದ ಕಚೇರಿಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ವಾಲ್ಮೀಕಿ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದರು.

‘ಕಾಂಗ್ರೆಸ್ ತೋರಿಕೆಯ ಜಾತ್ಯತೀತ ಪಕ್ಷ. ಬಿಜೆಪಿಯಿಂದ ಮಾತ್ರ ಎಲ್ಲ ವರ್ಗದ ಹಿತ ಕಾಯಲು ಸಾಧ್ಯ. ಮುಂಬರುವ ಹಿರಿಯೂರು ಕ್ಷೇತ್ರದ ಉಪಚುನಾವಣೆಯಲ್ಲಿ ಪರಿಶಿಷ್ಟ ಪಂಗಡದವರು ಜೆಡಿಎಸ್–ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ’ ಎಂದು ಅವರು ಮನವಿ ಮಾಡಿದರು.

‘ಬಿಜೆಪಿ ಸರ್ಕಾರ ಹೆಚ್ಚಿಸಿದ್ದ ಶೇ 7 ಮೀಸಲಾತಿ ಜಾರಿಗೆ ಸಂವಿಧಾನದ 9ನೇ ಷೆಡ್ಯೂಲ್ಗೆ ಸೇರಿಸುವ ಅಗತ್ಯ ಇಲ್ಲವೆಂದು ಈಗಾಗಲೇ ಸಂಸದ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ. ಪರಿಶಿಷ್ಟ ಜಾತಿ–ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಹಣವನ್ನು ಕಾಂಗ್ರೆಸ್ ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸುವ ಮೂಲಕ ವಂಚನೆ ಮಾಡಿದೆ. ಮುಂಬರುವ ಚುನಾವಣೆಗಳಲ್ಲಿ ಪರಿಶಿಷ್ಟ ಪಂಗಡದವರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕು’ ಎಂದು ವಾಲ್ಮೀಕಿ ಸಮುದಾಯದ ಮುಖಂಡ ಟಿ.ಬಸವರಾಜ ನಾಯಕ ಮನವಿ ಮಾಡಿದರು.

ಸಭೆಯಲ್ಲಿ ಮುಖಂಡರಾದ ಕೆ.ಎಂ. ಕೊಟ್ಟಿಗೆ ನಾಗರಾಜ್, ಆನೆಸಿದ್ರಿ ಗ್ರಾಮದ ಕೃಷ್ಣಪ್ಪ, ಜೆಜಿ ಹಳ್ಳಿ ಪಾಪಣ್ಣ, ಎಂ.ಡಿ. ಕೋಟೆ ರಾಘವೇಂದ್ರ, ಹುಲಿತೊಟ್ಟಿಲು ಗ್ರಾಮದ ಕವಿತಾ, ರಾಮಾಂಜನೇಯ, ಮದಕರಿ ಟೈಲರ್ ರಾಮಾಂಜನೇಯ, ನಂಜಯ್ಯನಕೊಟ್ಟಿಗೆ ನಾಗರಾಜ, ಗೌಡನಹಳ್ಳಿ ಪರಮೇಶ್ವರ, ಜಿ.ಎನ್.ರಾಜು, ಕೋಡಿಹಳ್ಳಿ ತಿಪ್ಪೇಸ್ವಾಮಿ, ಭೀಮಣ್ಣ, ಗಾಯತ್ರಿಪುರದ ನಾಗರಾಜ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-44-1254377611

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.