ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮಕ್ಕೆ ಹೆಚ್ಚುವರಿ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

Published : 22 ಆಗಸ್ಟ್ 2024, 16:27 IST
Last Updated : 22 ಆಗಸ್ಟ್ 2024, 16:27 IST
ಫಾಲೋ ಮಾಡಿ
Comments

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಿಗಮಕ್ಕೆ ಹೆಚ್ಚುವರಿ ಅನುದಾನ ನೀಡುವಂತೆ ಕೋರಿ, ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದ ಸ್ವಾಮೀಜಿ ಮತ್ತು ಸಚಿವ ಸತೀಶ ಜಾರಕಿಹೊಳಿ ನೇತೃತ್ವದ ಶಾಸಕರ ಮತ್ತು ಸಮುದಾಯದ ಮುಖಂಡರ ನಿಯೋಗವು ಗುರುವಾರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿತ್ತು.

‘ನಿಗಮಕ್ಕೆ ಈ ಹಿಂದೆ ನೀಡಲಾಗಿದ್ದ ಅನುದಾನವು ಅಕ್ರಮವಾಗಿ ವರ್ಗಾವಣೆಯಾಗಿದೆ. ಈ ಪ್ರಕರಣದಲ್ಲಿ ₹50 ಕೋಟಿಯನ್ನು ವಿಶೇಷ ತನಿಖಾ ದಳವು ಬ್ಯಾಂಕ್‌ ಖಾತೆಗಳಲ್ಲೇ ಫ್ರೀಜ್‌ ಮಾಡಿ ಇಟ್ಟಿದೆ. ₹30 ಕೋಟಿಯಷ್ಟು ಹಣವನ್ನು ವಸೂಲಿ ಮಾಡಲಾಗುತ್ತಿದೆ. ಹೀಗಾಗಿ ಯಾವುದೇ ಚಟುವಟಿಕೆ ನಡೆಸಲು ನಿಗಮದಲ್ಲಿ ಅನುದಾನ ಲಭ್ಯವಿಲ್ಲ. ಹೆಚ್ಚುವರಿ ಅನುದಾನ ನೀಡಿ’ ಎಂದು ನಿಯೋಗ ಕೋರಿತ್ತು. 

ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ, ‘ಪ್ರಕರಣ ಪೂರ್ತಿ ಇತ್ಯರ್ಥ ಆಗುವವರೆಗೂ ನಿಗಮದ ಮತ್ತು ಸಮುದಾಯದ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವುದು ನಮ್ಮ ಆದ್ಯತೆ. ಹೀಗಾಗಿ ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT