ಮೈಸೂರು: ‘ನಮ್ಮ ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಲ್ಲಿನ ವಿಶ್ವೇಶ್ವರ ನಗರದಲ್ಲಿ ಜಿಸಿ’ಸ್ ಸ್ಪೋರ್ಟ್ಸ್ ಮೆಡಿಸನ್ ಸೆಂಟರ್ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡ (50 ಹಾಸಿಗೆಗಳಿಂದ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿದೆ)ವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ಬಂದಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ತಿಳಿಸಿದ್ದರು. ಈ ನಿಟ್ಟಿನಲ್ಲಿ ನುಡಿದಂತೆ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಎಲ್ಲರನ್ನೂ ಸಾಮಾಜಿಕ, ಆರ್ಥಿಕವಾಗಿ ಸಫಲರಾಗಿಸುವ ದಿಕ್ಕಿನಲ್ಲಿ ದೃಢವಾದ ಹೆಜ್ಜೆಗಳನ್ನು ಇಟ್ಟಿದ್ದೇವೆ. ನುಡಿದಂತೆ ನಡೆಯುವುದು ಕಷ್ಟದ ಕೆಲಸವಾದರೂ, ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಹೇಳಿದರು.

‘ಡಾ.ಗಿರೀಶ್ ಚಂದ್ರ ಅವರು ವೈದ್ಯರಾಗಿ ಬದುಕನ್ನು ಸಾರ್ಥಕಗೊಳಿಸಿಕೊಳ್ಳುತ್ತಿದ್ದಾರೆ. ಸಮಾಜದಲ್ಲಿರುವ ಬಡವರಿಗೆ ಉಚಿತವಾಗಿ, ಇಲ್ಲದಿದ್ದರೆ ಕಡಿಮೆ ಹಣದಲ್ಲಿ ಚಿಕಿತ್ಸೆ ಒದಗಿಸಬೇಕು’ ಎಂದು ಸಲಹೆ ನೀಡಿದರು.

‘ಮೈಸೂರು ಜಿಲ್ಲೆಯವನೇ ಆದ ನನ್ನ ಮೇಲೆ ಇಲ್ಲಿನ ಜನರ ಋಣವಿದೆ. ಆದ್ದರಿಂದ ಮೈಸೂರಿನ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದೇನೆ. ಸಮಾಜಮುಖಿಯಾಗುವ ಮೂಲಕ ಮನುಷ್ಯ ತನ್ನ ಬದುಕನ್ನು ಸಾರ್ಥಕಗೊಳಿಸಿಕೊಳ್ಳಬೇಕು’ ಎಂದರು.

‘ಈ ಭಾಗದಲ್ಲಿ ಇಂಥದೊಂದು ಆಸ್ಪತ್ರೆ ಬೇಕಾಗಿತ್ತು. ಇದನ್ನು ಸಾಧ್ಯವಾಗಿಸಿದ್ದಕ್ಕಾಗಿ ಗಿರೀಶ್ ಚಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಒಳ್ಳೆಯ ವೈದ್ಯ ಅವರು’ ಎಂದರು.

‘ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳು ಈಗ ಆಗಿವೆ. ಒಳ್ಳೆಯ ವೈದ್ಯ ಎನಿಸಿಕೊಳ್ಳಬೇಕಾದರೆ ಸೇವಾ ಮನೋಭಾವ ಇರಬೇಕು. ಸಮಾಜದಲ್ಲಿ ಶಿಕ್ಷಣದೊಂದಿಗೆ ಆರೋಗ್ಯ ಬಹಳ ಮುಖ್ಯ. ಆರೋಗ್ಯವಾಗಿ ಎಷ್ಟು ದಿನ ಬದುಕುತ್ತೇವೆ ಎನ್ನುವುದು ಬಹಳ ಮುಖ್ಯ’ ಎಂದು ಹೇಳಿದರು.

‘ಆರೋಗ್ಯವಾಗಿರಬೇಕು ಎಂದು ಎಷ್ಟೇ ಅಂದುಕೊಂಡರೂ ವಯಸ್ಸಾಗುತ್ತಿರುವುದರಿಂದ ನನಗೂ ಆಗಾಗ ಆರೋಗ್ಯ ಕೆಡುತ್ತಿದೆ’ ಎಂದರು.

ಶಾಸಕ ಕೆ.ಹರೀಶ್ಗೌಡ, ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಆಸ್ಪತ್ರೆಯ ಮುಖ್ಯಸ್ಥ ಡಾ.ಗಿರೀಶ್ ಚಂದ್ರ ಹಾಗೂ ಆಡಳಿತಾಧಿಕಾರಿ ಲಿಖಿತಾ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.