ಬೆಂಗಳೂರು: ‘ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪಡೆದ ಮತಗಳು ಕಾಂಗ್ರೆಸ್ ಪಕ್ಷದವು ಎನ್ನುವ ಮೂಲಕ ಸಿದ್ದರಾಮಯ್ಯ ಅವರು ಆ ಕ್ಷೇತ್ರದ ಪ್ರಜ್ಞಾವಂತ ಮತದಾರರಿಗೆ ಅವಮಾನ ಮಾಡಿದ್ದಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸಿದ್ದರಾಮಯ್ಯ ಹೇಳಿಕೆ ಕುರಿತು ಟ್ವಿಟರ್‌ನಲ್ಲಿ ಸೋಮವಾರ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ‘ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಕಣಕ್ಕಿಳಿಸಿದ್ದರಿಂದ ಕಾಂಗ್ರೆಸ್ ಸೋತಿದೆ ಎಂದಿದ್ದೀರಿ. ನಿಮಗೆ ಅಲ್ಪಸಂಖ್ಯಾತರ ಮೇಲೆ ಕೋಪವೊ? ಜೆಡಿಎಸ್ ಮೇಲೆ ಅಸಮಾಧಾನವೊ ಅರ್ಥವಾಗುತ್ತಿಲ್ಲ. ನೀವು ಯಾವ ಅಲ್ಪಸಂಖ್ಯಾತ ನಾಯಕರನ್ನೂ ಬೆಳೆಸಿದ ನಿದರ್ಶನ ಇಲ್ಲ’ ಎಂದು ತಿರುಗೇಟು ನೀಡಿದ್ದಾರೆ.

‘ಬಸವಕಲ್ಯಾಣದಲ್ಲಿ ಸೋತಿದ್ದೀರಿ. ಮಸ್ಕಿ ಕ್ಷೇತ್ರದಲ್ಲೂ ನಿಮ್ಮ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲು ಬಯಸಿದವರು ನೀವು. ಅಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ನೀವು ಎಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೀರಿ ಎಂಬುದನ್ನು ಕಾಂಗ್ರೆಸ್ ಸ್ನೇಹಿತರೇ ಕಂಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಹುದ್ದೆಯ ಕನಸು ಕಾಣುತ್ತಿರುವ ನೀವು ಸ್ವಂತ ಪಕ್ಷಕ್ಕಾದರೂ ಮೋಸ ಮಾಡುವುದನ್ನು ಬಿಡಿ. ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಎಲ್ಲ ಸ್ವಾತಂತ್ರ್ಯ ಹೊಂದಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.