ಬೆಂಗಳೂರು: ಡಿ.ಕೆ.ಶಿವಕುಮಾರ್ ಗೊಂದಲದ ವಾತಾವರಣದಲ್ಲಿ ತಮ್ಮ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ. ರಾಜ್ಯದ ಜನತೆ ಈಗಾಗಲೇ ಈ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಅವರಿಗೆ ಅವಕಾಶ ಬಂದಾಗ ಈ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ರಾಜ್ಯದ ಆಡಳಿತದಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ. ಇದು ಕಾಂಗ್ರೆಸ್ ದುರಾಡಳಿತದ ಮುಂದುವರೆದ ಭಾಗ. ರಾಜ್ಯದ ಆರ್ಥಿಕತೆಯ ವಿಚಾರದಲ್ಲಿ ಈಗಾಗಲೇ ಸಾಕಷ್ಟು ಹಾನಿ ಮಾಡಲಾಗಿದೆ ಎಂದರು.

ಸಂಪುಟ ಸೇರಲು ಪ್ರಥಮ ಬಾರಿ ಆಯ್ಕೆಯಾದವರಿಂದ ಹಿಡಿದು ಐದಾರು ಬಾರಿ ಆಯ್ಕೆಯಾದವರೂ ಲಾಬಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿದ್ದ ಸಚಿವರು ಸ್ಥಾನ ಬಿಟ್ಟು ಕೊಡಲು ಸಿದ್ಧರಿಲ್ಲ. ಹೀಗಾಗಿ ಪೈಪೋಟಿ ನಡೆಯುತ್ತಿದೆ. ಅಲ್ಲದೇ, ನೂತನ ಸಂಪುಟ ರಚನೆಯಲ್ಲಿ ಸಿದ್ದರಾಮಯ್ಯ ಮಹತ್ವದ ಪಾತ್ರ ನಿರ್ವಹಿಸಲಿದ್ದಾರೆ. ಅಲ್ಲದೇ ಅವರು ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಿರುವುದಾಗಿ ಹೇಳಿರುವುದು ಶಿವಕುಮಾರ್ ಪಾಲಿಗೆ ಅಪಾಯಕಾರಿ ಸಂದೇಶ. ಸರ್ಕಾರದ ಮೇಲೆ ತೂಗುಗತ್ತಿ ನೇತಾಡಿದಂತೆ ಎಂದು ತಿಳಿಸಿದರು.

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಆಗಿದ್ದು, ವ್ಯವಸ್ಥೆಯನ್ನು ಸುಧಾರಿಸಲು ಶಿವಕುಮಾರ್ ಅವರಿಗೆ ಸಮಯ ಸಿಗುತ್ತದೆಯೋ ಇಲ್ಲವೊ ಗೊತ್ತಿಲ್ಲ. ಸಂಪುಟ ರಚನೆಯ ಕಸರತ್ತಿನಲ್ಲಿ ಆಂತರಿಕ ಭಿನ್ನಮತ ಹೊರಬರುತ್ತಿದೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡದಿರುವುದರಿಂದ ಒಬಿಸಿ, ಎಸ್ಸಿ– ಎಸ್ಟಿ ಸಮುದಾಯವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.