ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4663 ಕೋಟಿ ರೂ. ಇನ್‌ಪುಟ್ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.