ಮೈಸೂರು: ‘ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೂ, ಮುಖ್ಯಮಂತ್ರಿ ಕುರ್ಚಿಗೂ ಸಂಬಂಧವಿಲ್ಲ. ಹೈಕಮಾಂಡ್ ಅನುಮತಿಸಿದರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
.ಕೇಂದ್ರದ ಬಾಕಿ: ಸರ್ವ ಪಕ್ಷ ನಿಯೋಗ; ಮುಖ್ಯಮಂತ್ರಿ ಸಿದ್ದರಾಮಯ್ಯ.
ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಹೈಕಮಾಂಡ್ ಸೂಚನೆ ಮೇರೆಗೆ ನಾವು ನಡೆಯುತ್ತೇವೆ. ’ ಎಂದರು.

‘ಅನುಮತಿ ಕೊಟ್ಟಾಗ ಬಜೆಟ್ ಮಂಡಿಸುತ್ತೇನೆ, ನೋಡೋಣ’ ಎಂದು ಪ್ರತಿಕ್ರಿಯಿಸಿದರು.

‘ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ. ನಾನು ಸೋಮವಾರದಿಂದ (ಮಾರ್ಚ್ 30) ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತೇನೆ. ಏ.5ರಂದು ಕೇರಳ ರಾಜ್ಯದ ಚುನಾವಣೆಯ ಪ್ರಚಾರಕ್ಕೂ ತೆರಳುತ್ತೇನೆ. ಈ ಹಿಂದೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿತ್ತು. ಇದು ನಮ್ಮ ಮುಂದಿನ ಗೆಲುವಿನ ದಿಕ್ಸೂಚಿಯಾಗಿದೆ. ದಾವಣೆಗೆರೆಯಲ್ಲಿ ಯಾವುದೇ ಗೊಂದಲವಿಲ್ಲ’ ಎಂದು ಹೇಳಿದರು.

‘ಉಪ ಚುನಾವಣೆ ಫಲಿತಾಂಶವು ಜನರು ಸರ್ಕಾರಕ್ಕೆ ಮಾಡುವ ಆಶೀರ್ವಾದ ಆಗಲಿದೆ. ಯಾವುದೇ ಚುನಾವಣೆ ನಡೆದರೂ ನಾವೇ ಗೆಲ್ಲುತ್ತೇವೆ. 2028ರ ವಿಧಾನಸಭಾ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
.ಸಿದ್ದರಾಮಯ್ಯ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಲಿ: ಅಹಿಂದ ಚಳವಳಿ ಆಗ್ರಹ.
‘ತಮಿಳುನಾಡು ಚುನಾವಣೆ ಪ್ರಚಾರಕ್ಕೆ ಹೋಗುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.

ನಂಟೇನೇ ಇರಲಿ, ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ

ಮೈಸೂರಿನಲ್ಲಿ ಡ್ರಗ್ಸ್ ದಂಧೆಯ ಬಗ್ಗೆ ಇಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಡ್ರಗ್ಸ್ ಮಾಫಿಯಾ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಡ್ರಗ್ಸ್ ಮುಕ್ತ ರಾಜ್ಯ ನಿರ್ಮಾಣ ನಮ್ಮ ಉದ್ದೇಶ’ ಎಂದು ಹೇಳಿದರು.

‘ಮೈಸೂರಿನಲ್ಲಿ ಡ್ರಗ್ಸ್ ಜಾಲ ಪತ್ತೆಹಚ್ಚಿರುವ ಬಗ್ಗೆ ಗೊತ್ತಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ನಂಟು ಎಲ್ಲಿಗಾದರೂ ಇರಲಿ, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದರು.
.ಮುಸ್ಲಿಂ ಸಮುದಾಯದ ಮುಖಂಡರ ಮನವೊಲಿಸುತ್ತೇವೆ: ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.