ಬೆಂಗಳೂರು: ‘ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲ ಆರ್.ಎನ್. ರವಿ ಅವರು ಏಕಪಕ್ಷೀಯವಾಗಿ ಕೈಗೊಂಡಿರುವ ತೀರ್ಮಾನಗಳನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪು, ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

‘ಸುಪ್ರೀಂ ಕೋರ್ಟಿನ ತೀರ್ಪು ರಾಜ್ಯಪಾಲ ಹುದ್ದೆಯ ಕರ್ತವ್ಯಗಳ ಇತಿಮಿತಿಯನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಿದೆ. ರಾಜ್ಯ ಸರ್ಕಾರ ಅಂಗೀಕರಿಸಿದ ಮಸೂದೆಗಳಿಗೆ ರಾಪ್ಟ್ರಪತಿಯಿಂದ ಅಂಕಿತ ಪಡೆಯುವ ಪ್ರಕ್ರಿಯೆ ಗರಿಷ್ಠ ಮೂರು ತಿಂಗಳ ಅವಧಿಯೊಳಗೆ ನಡೆಯಬೇಕು ಎಂದು ಸುಪ್ರೀಂ ಕೋರ್ಟ್ ಕಾಲಮಿತಿ ನಿಗದಿಪಡಿಸಿರುವುದರಿಂದ ಗೊಂದಲಗಳು ನಿವಾರಣೆಯಾಗಿವೆ’ ಎಂದಿದ್ದಾರೆ.

‘ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಸಂವಿಧಾನದ ಆಶಯ ಮತ್ತು ಸಾಂವಿಧಾನಿಕ ಹುದ್ದೆಯ ಘನತೆ-ಗೌರವವನ್ನು ಗಾಳಿಗೆ ತೂರಿ ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿ ವರ್ತಿಸುತ್ತಿರುವ ಆರೋಪಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಕೇಳಿಬರುತ್ತಿವೆ. ತಮ್ಮ ಪಕ್ಷವನ್ನು ಜನ ತಿರಸ್ಕರಿಸಿದ ರಾಜ್ಯಗಳಲ್ಲಿ ತಮ್ಮ ಆಣತಿ ಪಾಲಿಸುವ ರಾಜ್ಯಪಾಲರನ್ನು ನೇಮಿಸಿ, ಆಡಳಿತವನ್ನು ಪರೋಕ್ಷವಾಗಿ ನಿಯಂತ್ರಿಸಲು ಮೋದಿ ನೇತೃತ್ವದ ಸರ್ಕಾರ ಮಾಡುತ್ತಿರುವ ಪ್ರಯತ್ನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುತ್ತಿರುವ ದ್ರೋಹ’ ಎಂದು ಅವರು ಹೇಳಿದ್ದಾರೆ.

‘ಕರ್ನಾಟಕದಲ್ಲಿ ಕೂಡಾ ವಿಧಾನಮಂಡಲ ಅಂಗೀಕರಿಸಿದ ಕೆಲವು ಮಸೂದೆಗಳ ಬಗ್ಗೆ ರಾಷ್ಟ್ರಪತಿಯಿಂದ ಅಂಕಿತ ಪಡೆಯಲು ರಾಜ್ಯಪಾಲರು ವಿಳಂಬ ಧೋರಣೆ ಅನುಸರಿಸಿದ್ದು ಸಂಘರ್ಷಕ್ಕೆ ಕಾರಣವಾಗಿದೆ. ಹೀಗಿದ್ದರೂ ನಮ್ಮ ಸರ್ಕಾರ ಅನಗತ್ಯವಾಗಿ ಈ ಬೆಳವಣಿಗೆಗೆ ರಾಜಕೀಯ ಬೆರೆಸದೆ ಸಂಯಮದಿಂದ ನಡೆದುಕೊಂಡಿದೆ. ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ಅನಗತ್ಯ ಸಂಘರ್ಷವನ್ನು ಸುಪ್ರೀಂ ಕೋರ್ಟ್ನ ಈ ತೀರ್ಪು ಶಾಶ್ವತವಾಗಿ ಕೊನೆಗೊಳಿಸಲಿದೆ’ ಎಂದೂ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.