ಬೆಂಗಳೂರು: ‘ಸರ್ಕಾರಿ ಉದ್ಯೋಗ ಪಡೆದು ನೆಮ್ಮದಿಯ ಬದುಕು ಕಟ್ಟಿಕೊಳ್ಳಬೇಕೆಂಬ ಕನಸು ಹೊತ್ತಿರುವ ಉದ್ಯೋಗಾಕಾಂಕ್ಷಿಗಳ ಆಸೆ - ಆಕಾಂಕ್ಷೆಯನ್ನು ರಕ್ಷಿಸಿ, ಅರ್ಹರಿಗೆ ಸೂಕ್ತ ಉದ್ಯೋಗ ಖಚಿತಪಡಿಸಲು ನಮ್ಮ ಸರ್ಕಾರ ಬದ್ಧ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಮಂಗಳವಾರ ನಡೆಸಿದ ಪ್ರತಿಭಟನೆಯನ್ನು ಉಲ್ಲೇಖಿಸಿ ಹೇಳಿಕೆ ನೀಡಿರುವ ಅವರು, ‘ಈ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ, ಅನಿಶ್ಚಿತತೆಯನ್ನು ಅರ್ಥಮಾಡಿಕೊಳ್ಳಬಲ್ಲೆ’ ಎಂದಿದ್ದಾರೆ.

‘ನಾವು (ಕಾಂಗ್ರೆಸ್) ಅಧಿಕಾರಕ್ಕೆ ಬಂದಾಗ 2.64 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇದ್ದವು. ಹಿಂದಿನ ಬಿಜೆಪಿ ಸರ್ಕಾರ ಸಕಾಲದಲ್ಲಿ ನೇಮಕಾತಿಗಳನ್ನು ಆರಂಭಿಸದಿರುವುದು ಮತ್ತು ಹುದ್ದೆಗಳನ್ನು ಭರ್ತಿ ಮಾಡಲು ಸೂಕ್ತ ಯೋಜನೆ ರೂಪಿಸದ ಕಾರಣ ದೊಡ್ಡ ಸಂಖ್ಯೆಯಲ್ಲಿ ಹುದ್ದೆಗಳು ಖಾಲಿ ಉಳಿದಿವೆ’ ಎಂದಿದ್ದಾರೆ.

‘ವಿರೋಧ ಪಕ್ಷದ ನಾಯಕರು ನಿರಪರಾಧಿ ವಿದ್ಯಾರ್ಥಿಗಳಿಗೆ ತಪ್ಪು ಮಾರ್ಗದರ್ಶನ ಮಾಡಿ ತಮ್ಮ ರಾಜಕೀಯ ಸ್ವಾರ್ಥದ ಈಡೇರಿಕೆಗಾಗಿ ಬಳಸಿಕೊಳ್ಳುತ್ತಿದ್ದಾರೆ. ಉದ್ಯೋಗದ ನಿರೀಕ್ಷೆಯಲ್ಲಿರುವ ಯುವ ಜನರನ್ನು ಉಜ್ವಲ ಭವಿಷ್ಯದ ಕಡೆ ಯೋಚಿಸಲು ಪ್ರೇರೇಪಿಸುವ ಬದಲು, ಅವರ ಮೂಲಕ ಅಶಾಂತಿ ಉಂಟು ಮಾಡಲು ಹೊರಟಿರುವ ಈ ನಡೆ ಖಂಡನೀಯ’ ಎಂದು ಟೀಕಿಸಿದ್ದಾರೆ.

‘ಬಿಜೆಪಿ ಸರ್ಕಾರದ ಅವಧಿಯಲ್ಲಿ (2019–2023) ನೇಮಕಾತಿಯಲ್ಲಿ ನಡೆದ ಅಕ್ರಮಗಳು ಮತ್ತು ಭ್ರಷ್ಟಾಚಾರಗಳು ಇಂದಿನ ಈ ದುಸ್ಥಿತಿಗೆ ಕಾರಣ. ನ್ಯಾಯಾಲಯದಲ್ಲಿ ಪ್ರಕರಣಗಳು ನಡೆಯುತ್ತಿದ್ದ ಕಾರಣದಿಂದ ಹಲವು ನೇಮಕಾತಿ ಪ್ರಕ್ರಿಯೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಯಿತು. ಈ ವಿಳಂಬದಿಂದ ಅರ್ಹ ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗದಂತೆ ತಡೆಯಲು ಮುಂಬರುವ ನೇಮಕಾತಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷ ಸಡಿಲಿಸಲಾಗಿದೆ’ ಎಂದು ಹೇಳಿದ್ದಾರೆ.

ವರ್ಗಾವಣೆ ದಂಧೆಯ ಫಲ: ಎಚ್ಡಿಕೆ

ಅತಿ ಹೆಚ್ಚು ಹುದ್ದೆಗಳು ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಗಳಲ್ಲಿ ಖಾಲಿ ಇವೆ. ಬೆಂಗಳೂರು ನಗರದ 18 ಆಯಕಟ್ಟಿನ ಪೊಲೀಸ್ ಠಾಣೆಗಳಲ್ಲಿ ಇನ್ಸ್ಪೆಕ್ಟರ್ಗಳೇ ಇಲ್ಲ. ವರ್ಗಾವಣೆ ದಂಧೆಯಲ್ಲಿ ಸರ್ಕಾರ ಮುಳುಗಿದ್ದರ ಪರಿಣಾಮ ಇದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಕುರಿತು ‘ಎಕ್ಸ್’ ಮಾಡಿರುವ ಅವರು, ಆರ್.ವಿ. ದೇಶಪಾಂಡೆ ಅಧ್ಯಕ್ಷತೆಯ ಕರ್ನಾಟಕ ಆಡಳಿತ ಸುಧಾರಣೆ ಆಯೋಗದ ವರದಿಯಂತೆ ರಾಜ್ಯದಲ್ಲಿ 7 ಲಕ್ಷ ನಿರುದ್ಯೋಗಿಗಳಿದ್ದಾರೆ. ಇವರೆಲ್ಲರೂ ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿದ್ದು, ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಬೇಕಿತ್ತು. ಕುರ್ಚಿ ತಿಕ್ಕಾಟದಲ್ಲೇ ಮೂರು ವರ್ಷಗಳನ್ನು ಪೋಲು ಮಾಡಿದರು. ಯುವಜನರತ್ತ ಗಮನ ಹರಿಸಲೇ ಇಲ್ಲ ಎಂದು ದೂರಿದ್ದಾರೆ.

ಉದ್ಯೋಗ ಆಕಾಂಕ್ಷಿಗಳು ಬೀದಿಗೆ ಇಳಿದಿರುವುದನ್ನು ಲಘುವಾಗಿ
ಪರಿಗಣಿಸಬಾರದು. ಹುದ್ದೆಗಳನ್ನು ಕಾಲ ಕಾಲಕ್ಕೆ ತುಂಬದೇ ನಿರ್ಲಕ್ಷಿಸಿದ ಪರಿಣಾಮ ಯುವಜನರು ಪ್ರತಿಭಟನೆ ದಾರಿ ತುಳಿಯಲು ಕಾರಣ.
ಆಕಾಂಕ್ಷಿಗಳು ತಮ್ಮ ಹಕ್ಕು ಪ್ರತಿಪಾದಿಸುವ ವೇಗದಲ್ಲಿ ಕಾನೂನು ಕೈಗೆತ್ತಿ
ಕೊಳ್ಳಬಾರದು. ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು ಎಂದು ಹೇಳಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.