ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡೋ ಧಮ್ ಇದೆಯಾ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ಆರ್. ಅಶೋಕ ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿಗೆ ಒಂದೇ ಒಂದು ಸಭೆ ಮಾಡಲೂ ಬಿಡುವುದಿಲ್ಲ ಎಂಬ ಡಿಸಿಎಂ ಹೇಳಿಕೆಗೆ ವಿರುದ್ಧವಾಗಿ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಅಶೋಕ ಸವಾಲು ಹಾಕಿದ್ದಾರೆ.

'ಉತ್ತರನ ಪೌರುಷ ಒಲೆಯ ಮುಂದೆ' ಎನ್ನುವ ಹಾಗೆ ನಿಮ್ಮ ಪ್ರತಾಪ ಬರೀ ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆಯೋದಕ್ಕೆ ಮಾತ್ರ ಸೀಮಿತ ಎಂದು ಡಿಕೆಶಿ ವಿರುದ್ಧ ಕಿಡಿಕಾರಿದ್ದಾರೆ.

'ರಾಜ್ಯದಲ್ಲಿ ಬಿಜೆಪಿಗೆ ಒಂದೇ ಒಂದು ಸಭೆ ಮಾಡಲೂ ಬಿಡುವುದಿಲ್ಲ ಎಂದು ಧಮ್ಕಿ ಹಾಕಿದ್ದೀರಲ್ಲ, ನಿಮಗೆ ನಿಜವಾಗಿಯೂ ತಾಕತ್ತಿದ್ದರೆ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಪಕ್ಷದಿಂದ ಉಚ್ಛಾಟನೆ ಮಾಡಿ ನೋಡೋಣ' ಎಂದು ಹೇಳಿದ್ದಾರೆ.

'ನಿಮ್ಮ ಪಕ್ಷದ ಸರ್ವೋಚ್ಚ ನಾಯಕಿ ಪ್ರಧಾನಿ ಆಗಿದ್ದಾಗ ಕಪ್ಪು ಬಾವುಟ ತೋರಿಸಿದ್ದ ವ್ಯಕ್ತಿಯನ್ನು ಪಕ್ಷಕ್ಕೆ ಕರೆದುಕೊಂಡು ಬಂದು ಎರಡೆರಡು ಬಾರಿ ಮುಖ್ಯಮಂತ್ರಿ ಮಾಡಿ, ಅವರ ಋಣದಲ್ಲಿ ಅಧಿಕಾರ ಅನುಭವಿಸುತ್ತಿದ್ದೀರಲ್ಲ, ಬಿಜೆಪಿ ಮಾಡುವ ಪ್ರತಿಭಟನೆಗೆ ಧಮ್ಕಿ ಹಾಕುವ ಯಾವ ನೈತಿಕತೆ ತಮಗೆ ಇದೆಯೇ' ಎಂದು ಪ್ರಶ್ನಿಸಿದ್ದಾರೆ.
.ಪಾಕ್ ವಿರುದ್ಧ ಯುದ್ಧ ಅಗತ್ಯವಿಲ್ಲ ಎಂಬ CM ಹೇಳಿಕೆಗೆ ಪ್ರತಿಕ್ರಿಯಿಸಲ್ಲ: ಡಿಕೆಶಿ.ಪಾಕಿಸ್ತಾನದ ಮುಸ್ಲಿಂ ಉಗ್ರರಿಗಾಗಿ ಕಾಂಗ್ರೆಸ್ ಹೃದಯಗಳು ಮಿಡಿಯುತ್ತಿದೆ: ಅಶೋಕ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.