ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಭೂಸ್ವಾಧೀನಕ್ಕೆ ಪೂರಕ ಬಜೆಟ್ನಲ್ಲಿ ₹5 ಸಾವಿರ ಕೋಟಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನವನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ಹಾಗೂ ಯುಕೆಪಿ–3ರಡಿ ಭೂಮಿ ಕಳೆದುಕೊಳ್ಳುವರ ರೈತರಿಗೆ ಪರಿಹಾರ ಚೆಕ್ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಬಜೆಟ್ನಲ್ಲಿ ಈಗಾಗಲೇ ₹3 ಸಾವಿರ ಕೋಟಿ ಅನುದಾನ ನೀಡಲಾಗಿತ್ತು. ಕಡಿಮೆಯಾಗುತ್ತದೆ ಎಂಬ ಮನವಿ ಮೇರೆಗೆ ಹೆಚ್ಚುವರಿ ಅನುದಾನ ನೀಡಲಾಗುವುದು ಎಂದರು.

ಯುಕೆಪಿ ವಿಷಯದಲ್ಲಿ 13 ವರ್ಷಗಳಾದರೂ ಗೆಜೆಟ್ ನೋಟಿಫಿಕೇಷನ್ ಹೊರಡಿಸಿಲ್ಲ. ಗುಜರಾತ್ನಲ್ಲಿ ನದಿ ನೀರು ಹಂಚಿಕೆ ಕುರಿತು ವ್ಯಾಜ್ಯ ಇದ್ದರೂ, ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಯಿತು. ಪ್ರಧಾನಿ ಮೋದಿ, ಸಚಿವ ಅಮಿತ್ ಷಾ ಅವರು ತಮ್ಮ ಸ್ವಂತ ರಾಜ್ಯಕ್ಕೆ ಮಾಡಿದ ಅನುಕೂಲವನ್ನು ಯುಕೆಪಿ ವಿಷಯದಲ್ಲಿ ಕರ್ನಾಟಕಕ್ಕೆ ಏಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಅನೇಕ ಬಾರಿ ಪತ್ರ ಬರೆದಿದ್ದೇನೆ. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ಆದರೂ, ಕೇಂದ್ರ ಸರ್ಕಾರ ಸ್ಪಂದಿಸಲಿಲ್ಲ. ಮಹದಾಯಿ ವಿಷಯದಲ್ಲಿ ಯಾವುದೇ ಕೋರ್ಟ್ನಲ್ಲಿ ಪ್ರಕರಣಗಳಿಲ್ಲ. ಆದರೂ, ಅನುಮತಿ ನೀಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಕೇರ್ ಸೆಂಟರ್ ಮಾಡಲಾಗುವುದು. ಕೋಲಾರ, ಮಂಗಳೂರಿನಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು. ಹಾವೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತೆರೆಯಲಾಗುವುದು. ಗ್ರಾಮೀಣ ಹಾಗೂ ಬಡವರ ಮಕ್ಕಳೂ ವೈದ್ಯರಾಗಬೇಕು ಎಂದರು.

ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಮಾತನಾಡಿ, ಯುಕೆಪಿ 3ನೇ ಹಂತದ ಯೋಜನೆಗೆ ಭೂಸ್ವಾಧೀನ ಮಾಡಿಕೊಳ್ಳಬಾರದು. ಪರಿಹಾರ ನೀಡಬಾರದು ಎಂದು ಆಂಧ್ರಪ್ರದೇಶ ಕೇಂದ್ರದ ಮೇಲೆ ಒತ್ತಡ ಹಾಕುತ್ತಿದೆ. ಹಾಗೆಯೇ ಮಹಾರಾಷ್ಟ್ರವೂ ವಿರೋಧ ವ್ಯಕ್ತಪಡಿಸಿದೆ. ಈ ವಿಷಯದ ವಾಸ್ತವ ಮನವರಿಕೆ ಮಾಡಲು ಮಂಗಳವಾರ ದೆಹಲಿಗೆ ಹೋಗಲಿದ್ದೇವೆ. ಸಂಸದರನ್ನೂ ಭೇಟಿ ಮಾಡಲಿದ್ದೇವೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.