ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಮೀಸಲಾತಿಯ ಒಟ್ಟು ಪ್ರಮಾಣವನ್ನು ಶೇ 56ರಷ್ಟಕ್ಕೆ ಹೆಚ್ಚಿಸಿ, ಸಂವಿಧಾನದ 9ನೇ ಷೆಡ್ಯೂಲ್ನಲ್ಲಿ ಸೇರಿಸುವಂತೆ ಒತ್ತಾಯಿಸಲು ಪ್ರಧಾನಿ ಬಳಿಗೆ ಸರ್ವಪಕ್ಷ ಸದಸ್ಯರ ನಿಯೋಗ ಕರೆದೊಯ್ಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದಲ್ಲಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿ ಮಾಡಿತ್ತು. ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 17 ಮತ್ತು ಶೇ 7ಕ್ಕೆ ಹೆಚ್ಚಿಸುವ ಸಲುವಾಗಿ, ಒಟ್ಟಾರೆ ಮೀಸಲಾತಿ ಪ್ರಮಾಣವನ್ನು ಶೇ 56ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತನ್ನಿ’ ಎಂದು ಈ ವೇಳೆ ಮನವಿ ಮಾಡಿತ್ತು.

ನಿಯೋಗದ ಜತೆಗೆ ಚರ್ಚಿಸಿದ ಸಿದ್ದರಾಮಯ್ಯ ಅವರು, ‘ಈ ಕುರಿತು ಕೇಂದ್ರಕ್ಕೆ ಈಗಾಗಲೇ ಪ್ರಸ್ತಾವ ಕಳುಹಿಸಲಾಗಿದೆ. ಈಗ ಮತ್ತೆ ಸಂಬಂಧಿತರ ಸಭೆ ಕರೆದು, ಪ್ರಧಾನಿ ಮತ್ತು ಕೇಂದ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರನ್ನು ಭೇಟಿ ಮಾಡಲು ಕ್ರಮ ತೆಗೆದುಕೊಳ್ಳುತ್ತೇನೆ’ ಎಂದು ಹೇಳಿದರು ಎಂದು ಮೂಲಗಳು ತಿಳಿಸಿವೆ.

ಸಂಬಂಧಪಟ್ಟ ಸಚಿವರು, ಶಾಸಕರ ಸಭೆಯನ್ನು ಕರೆಯಲು ಮತ್ತು ಮೀಸಲಾತಿ ವಿಚಾರದಲ್ಲಿ ನ್ಯಾಯಾಲಯದಲ್ಲಿ ಇರುವ ತಡೆಯನ್ನು ತೆರವು ಮಾಡಿಸಲು ಅಗತ್ಯ ಕ್ರಮ ತೆಗೆದುಕೊಳ್ಳಿ ಎಂದು ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚಿಸಿದರು ಎಂದು ಹೇಳಿವೆ.

ಸಂಜಯ ಕುಮಾರ ಸ್ವಾಮೀಜಿ, ರಾಮಲಿಂಗೇಶ್ವರ ಸ್ವಾಮೀಜಿ, ಈಶ್ವರಾನಂದ ಸ್ವಾಮೀಜಿ, ಪ್ರಕಾಶ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಸಮಾನ ಮನಸ್ಕರ ವೇದಿಕೆಯ ರಾಜಪ್ಪ, ರಾಜಣ್ಣ ಟಿ., ರೇವತಿ, ಸಣ್ಣ ನಾಯಕ್, ರಾಧಾಕೃಷ್ಣ ಪಲ್ಲಕ್ಕಿ, ಪಂಪಾಪತಿ, ತುಳಸೀರಾಂ ಟಿ.ಆರ್., ಮಾರೆಪ್ಪ ನಾಯಕ್, ಶರಣು ನಾಯಕ್ ನಿಯೋಗದಲ್ಲಿದ್ದರು.

ಜನಜಾಗೃತಿಗೆ ತೀರ್ಮಾನ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಕ್ಕೆ ಹೆಚ್ಚಳ ಮಾಡಿದ್ದ ಮೀಸಲಾತಿ ಪ್ರಮಾಣವನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಿರುವುದನ್ನು ಖಂಡಿಸಿ ಜನಜಾಗೃತಿ ಮೂಡಿಸಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ತಮ್ಮ ನಿವಾಸದಲ್ಲಿ ಮಂಗಳವಾರ ನಡೆದ ಬಿಜೆಪಿಯ ಎಸ್ಸಿ–ಎಸ್ಟಿ ಮುಖಂಡರ ಸಭೆಯ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಮೀಸಲಾತಿ ಹೆಚ್ಚಳದ ಕುರಿತು ಸಮ್ಮಿಶ್ರ ಸರ್ಕಾರದ ಅವಧಿಯಲ್ಲೇ ನ್ಯಾಯಮೂರ್ತಿ ನಾಗಮೋಹನ್ದಾಸ್ ಅವರ ವರದಿ ಬಂದಿತ್ತು. ಆ ಬಳಿಕ ನಾನು ಮುಖ್ಯಮಂತ್ರಿ ಆಗಿದ್ದಾಗ ಎಸ್ಸಿ ಸಮುದಾಯಕ್ಕೆ ಶೇ 15ರಿಂದ ಶೇ 17ಕ್ಕೂ ಹಾಗೂ ಎಸ್ಟಿ ಸಮುದಾಯಕ್ಕೆ ಶೇ 3ರಿಂದ ಶೇ 7ಕ್ಕೂ ಮೀಸಲಾತಿ ಹೆಚ್ಚಿಗೆ ಮಾಡಿದ್ದೆ. ಇದರಿಂದ ಈ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು’ ಎಂದು ಹೇಳಿದರು.

‘ಕಾಂಗ್ರೆಸ್ ಸರ್ಕಾರ ಈಗ ಸುಪ್ರೀಂ ಕೋರ್ಟ್ ಆದೇಶ, ನಾಗಮೋಹನ್ ದಾಸ್ ವರದಿ, ಜೆ.ಸಿ.ಮಾಧುಸ್ವಾಮಿ ಸಮಿತಿ ವರದಿ ಇವುಗಳಲ್ಲಿ ಯಾವುದನ್ನೂ ಜಾರಿ ಮಾಡದೇ ಗೊಂದಲ ಸೃಷ್ಟಿ ಮಾಡಿದೆ. ಡಿಸೆಂಬರ್ನಲ್ಲಿ ನಡೆದ ಬೆಳಗಾವಿ ಅಧಿವೇಶನದಲ್ಲಿ ಎಸ್ಸಿ–ಎಸ್ಟಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 17 ಮತ್ತು ಶೇ 7ಕ್ಕೆ ಹೆಚ್ಚಿಸುವುದಾಗಿ ಮಸೂದೆ ಅಂಗೀಕಾರ ಮಾಡಿದ್ದಾರೆ. ಇನ್ನೊಂದು ಕಡೆ ಈ ಸಮುದಾಯಗಳಿಗೆ ಶೇ 15 ಮತ್ತು ಶೇ 3ರಷ್ಟು ಮೀಸಲಾತಿ ಜಾರಿ ಮಾಡಿದ್ದಾರೆ. ಈ ವೈರುಧ್ಯವನ್ನು ದಲಿತ ಸಮುದಾಯಗಳು ಅರ್ಥ ಮಾಡಿಕೊಳ್ಳಬೇಕು. ಈ ಸರ್ಕಾರಕ್ಕೆ ಬದ್ಧತೆ ಇಲ್ಲದಿರುವುದನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತೇವೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-51-463692157

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.