ಚಿತ್ರದುರ್ಗ: ‘ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಕುರುಬರಿಗಷ್ಟೆ ಅಲ್ಲ, ಇಡೀ ಅಹಿಂದ ವರ್ಗಕ್ಕೇ ನೋವು ತಂದಿದೆ’ ಎಂದು ಕುರುಬರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಟಿ. ಜಗದೀಶ್ ಬೇಸರ ವ್ಯಕ್ತಪಡಿಸಿದರು.

‘ಅಹಿಂದ ಸಂಘಟಕ ಸಿದ್ದರಾಮಯ್ಯ ಕಾಂಗ್ರೆಸ್ಗೆ ಬಂದಾಗ ವರಿಷ್ಠರು ಸ್ವಾಗತಿಸಿ ಎರಡು ಬಾರಿ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿದರು. ಎರಡನೇ ಬಾರಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಬಡವರು, ದೀನ ದಲಿತರು, ಶೋಷಿತರು, ಧ್ವನಿಯಿಲ್ಲದವರಿಗೆ ಶಕ್ತಿ ತುಂಬಿದರು’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಕುರುಬರಿಗೆ ಜೆಡಿಎಸ್ನಲ್ಲಿ ಅವಕಾಶ ಕಡಿಮೆ ಇದೆ. ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ, ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು. ಜೊತೆಗೆ ನಿಗಮ ಮಂಡಳಿಗಳ ನೇಮಕದಲ್ಲಿ ಆದ್ಯತೆ ನೀಡಬೇಕು. ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಐದು ಸಚಿವ ಸ್ಥಾನ ನೀಡಬೇಕು’ ಎಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಶ್ರೀರಾಮ, ಗೌರವ ಅಧ್ಯಕ್ಷ ಎಚ್. ಮಂಜಪ್ಪ, ನಿರ್ದೇಶಕರಾದ ಲಿಂಗಮೂರ್ತಿ, ಸುರೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-44-1996308999

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.