ಬೆಂಗಳೂರು: ಜನನಾಯಕ, ಅಹಿಂದ ಮೂಲಕವೇ ಗುರುತಿಸಿಕೊಂಡಿದ್ದ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಕಾಂಗ್ರೆಸ್ ನಾಯಕರು ಮಾತ್ರವಲ್ಲದೇ ಪಕ್ಷ ತೊರೆದಿರುವ ನಾಯಕರು ಸಹ ದುಃಖ ವ್ಯಕ್ತಪಡಿಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಎಲ್ಲೋ ಒಂದು ಕಡೆ ನನಗೆ ಗೊತ್ತಿಲ್ಲದೆ ನೋವನ್ನ ಕೊಡ್ತಾ ಇದೆ. ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು. ಆದರೆ, ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ ಎಂದು ಮಾಜಿ ಶಾಸಕ ಬಿ,ಸಿ. ಪಾಟೀಲ್ ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.

ನಾನು ಪೊಲೀಸ್ ಅಧಿಕಾರಿಯಾಗಿದ್ದಾಗಿನಿಂದ ಅವರನ್ನು ನೋಡಿದ್ದೇನೆ. 2004 ರಿಂದ ಶಾಸಕನಾಗಿ ಅವರೊಂದಿಗಿದ್ದೆ. 2006ರಲ್ಲಿ ಅವರು ಕಾಂಗ್ರೆಸ್ಸಿಗೆ ಹೋಗಿ ಚುನಾವಣೆಗೆ ಸ್ಪರ್ಧಿಸಿದಾಗ ವಿರೋಧಿಸಿದ್ದೂ ಇದೆ. ಆದರೆ, ನಾನು 2008ರಲ್ಲಿ ಕಾಂಗ್ರೆಸ್ಸಿಗೆ ಬಂದ ಮೇಲೆ ಅದಾವುದನ್ನು ಅವರು ಮನಸ್ಸಿನಲ್ಲಿ ಇಟ್ಟುಕೊಳ್ಳದೆ ನನ್ನ ಎಲ್ಲ ಚುನಾವಣೆಗಳಲ್ಲಿಯೂ ಸಹಾಯ ಮಾಡಿದ್ದಾರೆ ನನ್ನನ್ನು ಅತ್ಯಂತ ಆತ್ಮೀಯತೆಯಿಂದ ಬಿಸಿ ಎಂದೇ ಕರೆಯುತ್ತಿದ್ದರು. 2013ರಲ್ಲಿ ನಾನು ಸೋತಾಗಲೂ ನನ್ನ ಕ್ಷೇತ್ರಕ್ಕೆ ನಾಲ್ಕು ನೀರಾವರಿ ಯೋಜನೆಗಳನ್ನು ನೀಡಿದ್ದಾರೆ. ನಾನು ಎಂದಿಗೂ ಅದನ್ನು ಮರೆಯಲ್ಲ. ನನ್ನ ಕ್ಷೇತ್ರದ ಜನ ಕೂಡ ಎಂದೂ ಮರೆಯುವುದಿಲ್ಲ ಎಂದಿದ್ದಾರೆ.

ಸಿದ್ದರಾಮಯ್ಯನವರ ಗತ್ತು ಮತ್ತು ಗಾಂಭೀರ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ತಂದು ಕೊಟ್ಟಿತ್ತು. ಅಧಿಕಾರ ಶಾಶ್ವತವಲ್ಲ. ಆದರೆ, ಅವರು ಅಧಿಕಾರ ಬಿಟ್ಟು ಕೆಳಗಿಳಿದಾಗ ನನಗೆ ಬಹಳ ನೋವುಂಟಾಗಿದೆ. ನನಗೆ ಅವರ ಬಗ್ಗೆ ಇದ್ದಂತಹ ಗೌರವ ಮತ್ತು ಪ್ರೀತಿ ಇದಕ್ಕೆ ಕಾರಣ. ನನ್ನ ಮನೆಗೆ ಎಷ್ಟು ಬಾರಿ ಬಂದಿದ್ದಾರೋ ಗೊತ್ತಿಲ್ಲ. ಕರೆದಾಗಲೆಲ್ಲ ಬರುತ್ತಾ ಇದ್ದರು. ಪ್ರೀತಿ ಹಂಚಿಕೊಳ್ಳುತ್ತಾ ಇದ್ದರು. 2023ರ ನಂತರ ಮುಖ್ಯಮಂತ್ರಿಯಾದ ಮೇಲೆ ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಒಂದು ಬಾರಿ ದೆಹಲಿ ಯಲ್ಲಿ ಭೇಟಿಯಾದಾಗ ನನ್ನ ಅತ್ಯಂತ ಪ್ರೀತಿ ವಿಶ್ವಾಸದಿಂದ ಮಾತನಾಡಿಸಿ ಬೆನ್ನು ತಟ್ಟಿದ್ದರು. ಸಿದ್ದರಾಮಯ್ಯ ಒಬ್ಬ ಇತಿಹಾಸಕಾರ, ಅರ್ಥಶಾಸ್ತ್ರಜ್ಞ, ಚಾಣಾಕ್ಷ, ಹೃದಯವಂತ, ನೇರ ನಿಷ್ಠುರ ನುಡಿಗೆ ಹೆಸರಾದವರು. ಇಂದು ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಭಗವಂತ ಅವರಿಗೆ ಆಯುರಾರೋಗ್ಯ ಭಾಗ್ಯನ್ನು ಕೊಡಲಿ. ಆರೋಗ್ಯದ ಬಗ್ಗೆ ಹೆಚ್ಚು ಗಮನನ್ನು ನೀಡಿ ಯುವಕರಿಗೆ ಮಾರ್ಗದರ್ಶನ ನೀಡಲಿ ಎಂದು ಬರೆದುಕೊಂಡಿದ್ದಾರೆ.
.ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದ ಬೋರಮ್ಮ.. 2 ಬಾರಿ ಸಿಎಂ ಆದ ಸಿದ್ದರಾಮಯ್ಯ.ಉಪಾಹಾರ ಸಭೆಯಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.