ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಸಚಿವಾಲಯದಲ್ಲಿ ಆಯಕಟ್ಟಿನ ಜಾಗದಲ್ಲಿದ್ದ ಕೆಲವು ಅಧಿಕಾರಿಗಳನ್ನು ‘ಸುರಕ್ಷಿತ’ ಹುದ್ದೆಗಳಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆಲವು ಅಧಿಕಾರಿಗಳಿಗೆ ಹುದ್ದೆ ಕೊಡಬೇಕೆಂದು ತರಾತುರಿಯಲ್ಲಿ ವರ್ಗಾವಣೆ ಮಾಡಿದ್ದ ರಿಂದಾಗಿ, ಈಗಾಗಲೇ ಆ ಹುದ್ದೆಗಳಲ್ಲಿದ್ದ ಅಧಿಕಾರಿಗಳು ಅತಂತ್ರಗೊಂಡಿದ್ದಾರೆ.

ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ವೆಂಕಟೇಶಯ್ಯ ಅವರಿಗೆ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಹುದ್ದೆ ನೀಡಲಾಗಿದೆ. ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಪಿ. ಕೋನರೆಡ್ಡಿ ಅವರನ್ನು ಕೆಪಿಟಿಸಿಎಲ್ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಮುಖ್ಯಮಂತ್ರಿಯ ಜಂಟಿ ಕಾರ್ಯದರ್ಶಿ ಟಿ.ಎನ್. ಕೃಷ್ಣಮೂರ್ತಿ ಅವರನ್ನು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ–2 ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಮುಖ್ಯಮಂತ್ರಿಯ ಜಂಟಿ ಕಾರ್ಯದರ್ಶಿ ಹುದ್ದೆಯಿಂದ ಈ ಹಿಂದೆ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆಗೊಂಡಿದ್ದ ಬಿ. ಶಿವಸ್ವಾಮಿ ಅವರನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ಕಾರ್ಯನಿರ್ವಾಹಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-51-1929861548

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.