ಬೆಂಗಳೂರು: ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲರಾಗಿರುವ ಸಿದ್ದರಾಮಯ್ಯ ಅವರು ಹೈಕಮಾಂಡ್ ಬಳಿ ಛೀಮಾರಿ ಹಾಕಿಸಿಕೊಂಡು, ಒಲ್ಲದ ಮನಸ್ಸಿನಿಂದ ನಿರ್ಗಮಿಸುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.

ಸಂಕಟ ಬಂದಾಗ ವೆಂಕಟರಮಣ ಎನ್ನುವಂತೆ ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ‘ಜಾತಿ ಜನಗಣತಿ ವರದಿ’ ಎಂಬ ಮಂಕುಬೂದಿ ಎರಚಿ, ಜನರ ಅನುಕಂಪ ಗಳಿಸುವ ಕುತಂತ್ರ ಈಗ ಗುಟ್ಟಾಗಿ ಉಳಿದಿಲ್ಲ. ರಾಜೀನಾಮೆ ನೀಡುವಾಗಲೂ ತುಷ್ಟೀಕರಣ ಮತ್ತು ಡೋಂಗಿ ಸಮಾಜವಾದ ಬಿಟ್ಟಿಲ್ಲ. ಕುರ್ಚಿ ಬಿಡುವ ಕೊನೆಯ ಕ್ಷಣದಲ್ಲೂ ಓಲೈಕೆ ರಾಜಕಾರಣ ಮುಂದುವರಿಸಿದ್ದಾರೆ ಎಂದು ದೂರಿದ್ದಾರೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ದತ್ತಾಂಶವನ್ನು ಕೇಲವೇ ಗಂಟೆಗಳಲ್ಲಿ ಅವಲೋಕಿಸಿ, ಅಂತಿಮ ವರದಿ ರೂಪಿಸುವುದು ಅಸಾಧ್ಯ. ಅದಕ್ಕಾಗಿ ಸಿದ್ದರಾಮಯ್ಯ ಅವರೇ ಹೈಕಮಾಂಡ್ ಮುಂದೆ 15 ದಿನಗಳು ಅವಕಾಶ ಕೇಳಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಹಾಗಿದ್ದಾಗ 24 ಗಂಟೆಗಳಲ್ಲಿ ವರದಿ ಸ್ವೀಕಾರ ಸಾಧ್ಯವೆ ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರ ಈಗಾಗಲೇ ಜಾತಿ ಜನಗಣತಿ ನಡೆಸುವುದಾಗಿ ಘೋಷಿಸಿದ್ದು, ಪ್ರಕ್ರಿಯೆಯೂ ಆರಂಭವಾಗಿದೆ. ಆದರೆ, ಸಿದ್ದರಾಮಯ್ಯ ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡಿದ್ದಾರೆ. ತರಾತುರಿಯಲ್ಲಿ ವರದಿ ಸ್ವೀಕರಿಸಿ, ಸೋರಿಕೆ ಮಾಡುವ ಮೂಲಕ ಸಮಾಜದಲ್ಲಿ ಜಾತಿ ಜಾತಿಗಳ ನಡುವೆ ಬೆಂಕಿ ಹಚ್ಚುವ ರಾಜಕಾರಣ ಮಾಡಿದ್ದಾರೆ. ಅವರ ಈ ನಡೆ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಕಪ್ಪು ಚುಕ್ಕೆಯಾಗಿ ಉಳಿಯಲಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.