ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಿಂದ ಕೆಳಗಿಳಿಯುತ್ತಿರುವುದನ್ನು ನೆನೆದು ಸಂತೋಷ್ ಲಾಡ್ ಕಾರಿನಲ್ಲೇ ಕಣ್ಣೀರಿಟ್ಟಿದ್ದಾರೆ.

ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ಕಾವೇರಿಯಲ್ಲಿ ಆಯೋಜಿಸಲಾಗಿದ್ದ ಉಪಹಾರದ ಸಭೆ ಮುಗಿದ ಬಳಿಕ ಸಂತೋಷ್ ಲಾಡ್ ಅವರು ಹೊರಬಂದರು. ನಿವಾಸದ ಆವರಣದಿಂದ ತಮ್ಮ ಕಾರಿನಲ್ಲಿ ತೆರಳುತ್ತಿದ್ದಾಗ ಅವರು ಅತ್ಯಂತ ಭಾವುಕರಾದರು.

ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಹುದ್ದೆಗೆ ತಮ್ಮ ರಾಜೀನಾಮೆ ನೀಡಿದರು. ಕಪ್ಪು ಬಣ್ಣದ ರೇಂಜ್ ರೋವರ್ ಕಾರಿನಲ್ಲಿ ತಮ್ಮ ನಿವಾಸ ‘ಕಾವೇರಿ’ಯಿಂದ ಲೋಕಭವನಕ್ಕೆ ಸಿದ್ದರಾಮಯ್ಯ ತೆರಳಿದರು.

ಸಚಿವ ಬಿ.ಎಸ್. ಸುರೇಶ್ ಅವರು ಕಾರು ಚಲಾಯಿಸಿಕೊಂಡು ಹೋದರು. ಸಿದ್ದರಾಮಯ್ಯ ಅವರಿಗೆ ಕೆಲವು ಸಚಿವರು, ಶಾಸಕರು ಸಾಥ್ ನೀಡಿದರು. ರಾಜ್ಯಪಾಲರ ಅನುಪಸ್ಥಿತಿಯಲ್ಲಿ, ಅವರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ಬಳಿಕ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ರಾಜೀನಾಮೆಯನ್ನು ಬಹಿರಂಗವಾಗಿ ಘೋಷಿಸಿದರು.

ರಾಜೀನಾಮೆ ಪತ್ರ ಸಲ್ಲಿಕೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ‘ಸಂವಿಧಾನವೇ ನನ್ನ ಧರ್ಮ. ನನ್ನ ಕೊನೆಯ ಉಸಿರಿನವರೆಗೂ ಹೋರಾಟ ಮಾಡುತ್ತೇನೆ. ಕರ್ನಾಟಕದ 7 ಕೋಟಿ ಜನರ ಸೇವೆ ಮಾಡುವ ಅವಕಾಶ ಸಿಕ್ಕಿತ್ತು. 2 ಬಾರಿ ಸಿಎಂ, ಎರಡು ಬಾರಿ ವಿಪಕ್ಷ ನಾಯಕನಾದೆ. ನನಗೆ ಅವಕಾಶ ಮಾಡಿಕೊಟ್ಟ ಸೋನಿಯಾ ರಾಹುಲ್ ಗಾಂಧಿ, ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಧನ್ಯವಾದಗಳು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.