ಬೆಂಗಳೂರು: ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ ಎಂದು ಸಿದ್ದರಾಮಯ್ಯ ಅವರು ತಮ್ಮ ವಿದಾಯದ ನುಡಿಯಲ್ಲಿ ಸ್ಪಷ್ಟವಾಗಿ ಉಚ್ಚರಿಸಿದ್ದಾರೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಳಿಕ ಜನತೆಗೆ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಅವರು ತಮ್ಮ ವಿದಾಯದ ನುಡಿಗಳನ್ನು ಸಲ್ಲಿಸಿದ್ದಾರೆ.

ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ. ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ ಎಂದಿದ್ದಾರೆ.

ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ. ಬುದ್ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿಯವರೇ ನನ್ನ ಆದರ್ಶ. ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ ಎಂದಿದ್ದಾರೆ.

ನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈ ವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರಋಣಿ ಎಂದು ಹೇಳಿಕೊಂಡಿದ್ದಾರೆ.

ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ. ನನ್ನ ಜೀವದ ಕೊನೆಯುಸಿರು ಇರುವವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.