ಮೈಸೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿ ಶನಿವಾರ ನಡೆಸುತ್ತಿರುವುದು ಸಾಧನಾ ಸಮಾವೇಶವಲ್ಲ, ಹೈಕಮಾಂಡ್ಗೆ ಬ್ಲಾಕ್ಮೇಲ್ ಮಾಡುತ್ತಿರುವ ಸಮಾವೇಶ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದರು.

ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸ್ಥಾನದ ಕುರ್ಚಿ ಅಲುಗಾಡುವ ಸಂದರ್ಭ ಎದುರಾದಾಗಲೆಲ್ಲಾ ಅವರು ಸಮಾವೇಶ ನಡೆಸುತ್ತಾರೆ. ಈ ಮೂಲಕ ಅವರ ಪಕ್ಷದ ಹೈಕಮಾಂಡ್ ಬೆದರಿಸುವ ತಂತ್ರ ಮಾಡುತ್ತಾರೆ’ ಎಂದು ಆರೋಪಿಸಿದರು.

‘ನವದೆಹಲಿಯಲ್ಲಿ ತಮ್ಮನ್ನು ಭೇಟಿಯಾಗಲು ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಸಮಯವನ್ನೇ ಕೊಡಲಿಲ್ಲ. ಹೀಗಾಗಿ ಸವಾಲು ಹಾಕುವ ಉದ್ದೇಶದಿಂದ ಈ ಸಮಾವೇಶ ಮಾಡುತ್ತಿದ್ದಾರೆ’ ಎಂದು ದೂರಿದರು.

‘ಏನು ಕಡಿದು ಕಟ್ಟೆಹಾಕಿದ್ದಾರೆಂದು ಸಮಾವೇಶ ಮಾಡುತ್ತಿದ್ದಾರೆ. ಮುಡಾ ಹಗರಣದ ಸಂದರ್ಭದಲ್ಲೂ ಮೈಸೂರಿನಲ್ಲಿ ಸಮಾವೇಶ ನಡೆಸಿದ್ದರು. ಕುರ್ಚಿಗೆ ಕಂಟಕ ಬಂದಾಗೆಲ್ಲಾ ಅವರಿಗೆ ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರು) ಸಮುದಾಯದವರು ನೆನಪಾಗುತ್ತಾರೆ’ ಎಂದು ವಾಗ್ದಾಳಿ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.