ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಪ್ರಧಾನಿ ದೇವೇಗೌಡರಿಗೆ 91ನೇ ಜನ್ಮದಿನ; ಸಿದ್ದರಾಮಯ್ಯ, ಡಿಕೆಶಿ ಶುಭಾಶಯ

Published 18 ಮೇ 2023, 10:02 IST
Last Updated 18 ಮೇ 2023, 10:02 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಇಂದು 91ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಇದರಂತೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮಾಜಿ ಪ್ರಧಾನಿಗಳು ಮತ್ತು ಜಾತ್ಯತೀತ ಜನತಾದಳದ ಹಿರಿಯ ನಾಯಕರಾದ ಎಚ್.ಡಿ. ದೇವೇಗೌಡ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ದೇವೇಗೌಡರಿಗೆ ಪರಮಾತ್ಮ ದೀರ್ಘ ಆಯುಷ್ಯ ಮತ್ತು ಆರೋಗ್ಯವನ್ನು ಕರುಣಿಸಲಿ. ಕರ್ನಾಟಕದ ಜನ, ನೆಲ, ಜಲ ಮತ್ತು ಭಾಷೆಯ ಹಿತಾಸಕ್ತಿ ರಕ್ಷಣೆಯ ಕಾರ್ಯಕ್ಕೆ ಗೌಡರ ಮಾರ್ಗದರ್ಶನ ಸದಾ ನಮಗಿರಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ಹುಟ್ಟುಹಬ್ಬದ ಸಂದೇಶದಲ್ಲಿ, ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಅವರು (ದೇವೇಗೌಡ) ಇಟ್ಟ ಹೆಜ್ಜೆಗಳು ನಮ್ಮಂಥ ನಾಯಕರಿಗೆ ಪ್ರೇರಕ ಶಕ್ತಿಯಾಗಿದೆ. ದೇವರು ಅವರಿಗೆ ಆಯುರಾರೋಗ್ಯ ಪ್ರಾಪ್ತಿ ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ದೇವೇಗೌಡ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ದೇಶಕ್ಕೆ ಅವರು ಸಲ್ಲಿಸಿದ ಕೊಡುಗೆ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT