ಬೆಂಗಳೂರು: ‘ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ. ಆದರೆ, ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಆರೋಪಿಸಿದ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದರು’ ಎಂದು ಮೂಲಗಳು ಹೇಳಿವೆ.

ತಮ್ಮ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ಟೀಕಿಸಿದ್ದ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಗುಡುಗಿದರು. ಸಿದ್ದರಾಮಯ್ಯನವರ ಈ ವಾಗ್ದಾಳಿ, ಭವಿಷ್ಯದಲ್ಲೂ ಸೈದ್ಧಾಂತಿಕ ಹೋರಾಟ ಮುಂದುವರೆಯುವ ಸ್ಪಷ್ಟ ಸಂದೇಶವನ್ನು ರವಾನಿಸಿದೆ.

‘ಕಾಂಗ್ರೆಸ್ ಅವಕಾಶ ಕೊಟ್ಟ ಕಾರಣ ನನಗೆ ರಾಜ್ಯದ ವಿರೋಧ ಪಕ್ಷದ ನಾಯಕ, ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರಲು ಸಾಧ್ಯವಾಯಿತು. 2013ರಿಂದ ಐದು ವರ್ಷ, ಈಗ ಮೂರು ವರ್ಷ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಈ ಎಂಟು ವರ್ಷಗಳಲ್ಲಿ ಜನರಿಗೆ ಕೊಟ್ಟ ಭರವಸೆ ಈಡೇರಿಸುವ ಕೆಲಸ ಮಾಡಿದ್ದೇನೆ. ಇದು ನನಗೆ ಮತ್ತು ನಮ್ಮ ಪಕ್ಷಕ್ಕೆ ತೃಪ್ತಿ ತಂದಿದೆ. ಪ್ರಧಾನಿ ಮೋದಿ ಅವರನ್ನೂ ಸೇರಿದಂತೆ ವಿರೋಧ ಪಕ್ಷದವರು ನನ್ನ ಬಗ್ಗೆ ತಪ್ಪು ಮಾಹಿತಿಯನ್ನು ಹರಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣವಿರುವುದಿಲ್ಲ ಮತ್ತು ಖಜಾನೆ ಖಾಲಿಯಾಗುತ್ತದೆ ಎಂದರು. ಆದರೂ, ಕರ್ನಾಟಕವು ಆದಾಯದ ವಿಷಯದಲ್ಲಿ ಇಡೀ ದೇಶದಲ್ಲಿ ನಂಬರ್ 1 ಸ್ಥಾನದಲ್ಲಿದೆ. ಜಿಎಸ್ಟಿ ಸಂಗ್ರಹದಲ್ಲಿ ನಾವು ಎರಡನೇ ಸ್ಥಾನದಲ್ಲಿದ್ದೇವೆ’ ಎಂದು ಸಿದ್ದರಾಮಯ್ಯ, ಹೈಕಮಾಂಡ್ ಹೇಳಿದ ತಕ್ಷಣ ಹುದ್ದೆ ತ್ಯಜಿಸಿದ್ದೇನೆ ಎಂದರು’ ಎಂದೂ ಗೊತ್ತಾಗಿದೆ.

‘ಸಿಎಲ್ಪಿ ನಾಯಕನಾಗಿ ಡಿ.ಕೆ.ಶಿವಕುಮಾರ್ ಅವರನ್ನು ಹೈಕಮಾಂಡ್ ಆಯ್ಕೆ ಮಾಡಿದೆ. ಡಿ.ಕೆ. ಶಿವಕುಮಾರ್ ಅವರಿಗೆ ಪೂರ್ಣ ಸಹಕಾರ ನೀಡುತ್ತೇನೆ ಎಂದೂ ಹೇಳಿದರು’ ಎಂದೂ ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.