ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಹುಲ್‌ ಮುಗಿಸಲು ಬಿಜೆಪಿ ಸಂಚು: ಸಿದ್ದರಾಮಯ್ಯ ಆರೋಪ

Published : 18 ಸೆಪ್ಟೆಂಬರ್ 2024, 15:39 IST
Last Updated : 18 ಸೆಪ್ಟೆಂಬರ್ 2024, 15:39 IST
ಫಾಲೋ ಮಾಡಿ
Comments

ಬೆಂಗಳೂರು: ರಾಹುಲ್‌ ಗಾಂಧಿ ಅವರ ಜನಪ್ರಿಯತೆ ಸಹಿಸದ ಬಿಜೆಪಿ ಅವರನ್ನು ಮುಗಿಸಲು ಸಂಚು ರೂಪಿಸಿದೆ. ಹಲವರು ಜೀವ ಬೆದರಿಕೆಯನ್ನೂ ಹಾಕಿದ್ದಾರೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. 

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ರಾಹುಲ್‌ ಗಾಂಧಿ ಅವರದು ತ್ಯಾಗ, ಬಲಿದಾನದ ಕುಟುಂಬ. ಇಂದಿರಾ, ರಾಜೀವ್‌ ಅವರು ದೇಶಕ್ಕಾಗಿ ಜೀವ ತೆತ್ತಿದ್ದಾರೆ. ಅವರ ಕುಟುಂಬದ ಕುಡಿ ರಾಹುಲ್‌ ದೇಶಕ್ಕಾಗಿ ಅವಿರತ ಹೋರಾಟ ನಡೆಸಿದ್ದಾರೆ. ಅವರ ಜನಪ್ರಿಯತೆ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳಿಗೆ ಸಹಿಸಲು ಆಗುತ್ತಿಲ್ಲ ಎಂದು ದೂರಿದರು.

‘ಇಂದಿರಾ ಗಾಂಧಿಗೆ ಆದ ಗತಿ ನಿಮಗೂ ಆಗುತ್ತದೆ. ನಾಲಿಗೆ ಕತ್ತರಿಸಿದರೆ ₹11 ಲಕ್ಷ ಬಹುಮಾನ ನೀಡಲಾಗುವುದು, ರಾಹುಲ್‌ ಭಯೋತ್ಪಾದಕ. ಅವರನ್ನು ಕೊಲ್ಲಬೇಕು’ ಎಂಬ ಸರಣಿ ಬೆದರಿಕೆ ಹಾಕಲಾಗಿದೆ. ಹೀಗೆ ಬೆದರಿಕೆ ಹಾಕಿದವರಲ್ಲಿ ಕೇಂದ್ರ ಸಚಿವರು, ಕೆಲವು ರಾಜ್ಯಗಳ ಶಾಸಕರು ಇದ್ದಾರೆ. ಇಂತಹ ಹೇಳಿಕೆ ನೀಡಿದ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಬೇಕು. ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.  

ಮೋದಿ ಐದು ವರ್ಷ ಪೂರೈಸಲ್ಲ:

ತೆಲುಗುದೇಶಂ, ಜೆಡಿಯು ಪಕ್ಷಗಳ ನೆರವಿನಿಂದ ಸರ್ಕಾರ ರಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಐದು ವರ್ಷಗಳನ್ನು ಪೂರೈಸುವುದು ಅನುಮಾನ. ನಿತೀಶ್‌ ಕುಮಾರ್, ಚಂದ್ರಬಾಬು ನಾಯ್ಡು ಹೆಚ್ಚು ಸಮಯ ಅವರ ಜತೆ ಇರುವುದಿಲ್ಲ. ಬೆಂಬಲ ಹಿಂಪಡೆದರೆ ಸರ್ಕಾರ ಪತನವಾಗಲಿದೆ. ಕಾಂಗ್ರೆಸ್‌ ಅಧಿಕಾರ ಪಡೆಯಲೂಬಹುದು ಎಂದು ಹೇಳಿದರು. 

ಮಹಿಳಾ ಸಮುದಾಯ, ದಲಿತ ಜನಾಂಗ ಹಾಗೂ ಒಕ್ಕಲಿಗ ಸಮುದಾಯವನ್ನು ಅತ್ಯಂತ ಕೆಟ್ಟದಾಗಿ ಅವಹೇಳನ ಮಾಡಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಎನ್ನುವ ಬೇಡಿಕೆ ಕುರಿತು ಪರಿಶೀಲಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT