2018ರ ವಿಧಾನಸಭಾ ಚುನಾವಣೆಯಲ್ಲಿ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮನ್ನು ಪರಾಭವಗೊಳಿಸಿದ್ದ ಈ ಭಾಗದ ಒಕ್ಕಲಿಗರ ನಾಯಕ, ಈಗ ಜೆಡಿಎಸ್‌ನಿಂದ ಮಾನಸಿಕವಾಗಿ ದೂರವಾಗಿರುವ ಶಾಸಕ ಜಿ.ಟಿ.ದೇವೇಗೌಡ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡು; ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ತಂತ್ರಗಾರಿಕೆಯನ್ನು ಸಿದ್ದರಾಮಯ್ಯ ರೂಪಿಸಿದ್ದರು ಎನ್ನಲಾಗಿದೆ.