ಮೈಸೂರು: ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕು ಎಂಬುದು ತಮ್ಮೊಬ್ಬರ ಬಯಕೆಯಲ್ಲ; ಇಡೀ ರಾಜ್ಯದ ಜನರ ಬಯಕೆಯೂ ಅದೇ ಆಗಿದೆ ಎಂದು ಶಾಸಕ ಜಮೀರ್ ಅಹಮ್ಮದ್ ಹೇಳಿದರು.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಡವರಿಗೆ ಒಳ್ಳೆಯದಾಗಬೇಕಾದರೆ ಸಿದ್ದರಾಮಯ್ಯ ಅವರಿಂದ ಮಾತ್ರ ಸಾಧ್ಯ ಎಂದು ಜನರು ಹೇಳುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ಸಂಸ್ಕೃತಿ ಇದ್ದರೂ, ಸುಮ್ಮನೇ ಯಾರನ್ನೋ ಮುಖ್ಯಮಂತ್ರಿಯಾಗಿ ಮಾಡುವುದಿಲ್ಲ’ ಎಂದರು.

ವಿವಿಧ ಸಮುದಾಯಗಳ ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅಲ್ಪಸಂಖ್ಯಾತರ ಬೇಡಿಕೆಗಳೂ ಸಾಕಷ್ಟಿವೆ. ಆದರೆ ಬಿಜೆಪಿ ಸರ್ಕಾರ ಅವುಗಳನ್ನು ಈಡೇರಿಸುತ್ತದೆ ಎಂದು ನಿರೀಕ್ಷೆ ಮಾಡಬಹುದೇ? ಬಿಜೆಪಿ ಆಡಳಿತದಲ್ಲಿ ಅಲ್ಪಸಂಖ್ಯಾತರು ಹೋರಾಟ ಮಾಡಿದರೆ ಏನು ಪ್ರಯೋಜನ’ ಎಂದು ಪ್ರಶ್ನಿಸಿದರು.

‘ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡದಂತೆ ಹೈಕಮಾಂಡ್ ತಾಕೀತು’
ಕುಶಾಲನಗರ (ಕೊಡಗು ಜಿಲ್ಲೆ): ‘ಚುನಾವಣೆಗೂ ಮೊದಲೇ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡದಂತೆ ಹೈಕಮಾಂಡ್ ತಾಕೀತು ಮಾಡಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಶನಿವಾರ ಇಲ್ಲಿ ಹೇಳಿದರು.

‘ಸಿದ್ದರಾಮಯ್ಯ ಮುಖ್ಯಮಂತ್ರಿ ಅಭ್ಯರ್ಥಿ’ ಎಂದು ಕೆಲವು ಶಾಸಕರು ಹೇಳುತ್ತಿರುವ ಬಗ್ಗೆ, ಸುದ್ದಿಗಾರರ ಕೇಳಿದ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.