ಕೋಲಾರ: ‘ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯುತ್ತಾರೆ’ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಒಬಿಸಿ ಸಲಹಾ ಮಂಡಳಿಯಲ್ಲಿ ಹಲವು ಮಂದಿ ಇದ್ದಾರೆ. ಸಿದ್ದರಾಮಯ್ಯ ಹಾಲಿ ಮುಖ್ಯಮಂತ್ರಿ ಆಗಿರುವ ಕಾರಣ ಅವರನ್ನೂ ಸೇರಿಸಿಕೊಂಡು ಜವಾಬ್ದಾರಿ ಕೊಟ್ಟಿದ್ದಾರೆ’ ಎಂದರು.

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂದು ಕೆಲ ಸ್ವಾಮೀಜಿ ಪ್ರತಿಪಾದಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ‘ಮುಖ್ಯಮಂತ್ರಿ ಆಗಬೇಕೆಂದು ಹಿತೈಶಿಗಳು ಹೇಳಬಹುದು. ಅದರಲ್ಲಿ ಯಾವುದೇ ತಪ್ಪು ಇಲ್ಲ. ಆದರೆ, ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ’ ಎಂದರು.

‘ಸೆಪ್ಟೆಂಬರ್ ಕ್ರಾಂತಿ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಅವರನ್ನೇ ಕೇಳಿ’ ಎಂದು ನುಡಿದರು.

ಕಾಂಗ್ರೆಸ್ ಮುಖಂಡರ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ಕುರಿತು, ‘ಇ.ಡಿಯವರು ರಾಜಕೀಯ ದುರುದ್ದೇಶದಿಂದ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ಕಾಂಗ್ರೆಸ್ ಶಾಸಕರು, ಮುಖಂಡರನ್ನೇ ಗುರಿ ಮಾಡಿಕೊಂಡಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಇದು ಬಿಜೆಪಿಗೆ ಶೋಭೆ ತರುವುದಿಲ್ಲ. ಈ ರೀತಿ ಮಾಡಬೇಡಿ ಎಂದು ಹಲವಾರು ಬಾರಿ ಮನವಿ ಮಾಡಿದ್ದೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.