ಬೆಂಗಳೂರು: ‘ಶೂದ್ರರು ಮತ್ತು ದಲಿತರಿಗೆ ಆರೆಸ್ಸೆಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು ‘ಜೀ..ಜೀ... ಹುಜೂರ್’ ಎಂದಷ್ಟೇ ಹೇಳಬೇಕು. ಇದಕ್ಕೆ ಬಿಜೆಪಿಯ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಬಿ.ಎಲ್. ಸಂತೋಷ್ ಅವರಿಗೆ ಕಳುಹಿಸಿರುವ ವಾಟ್ಸ್‌ಆ್ಯಪ್ ವಾಯ್ಸ್ ರೆಕಾರ್ಡ್ ಸಾಕ್ಷಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

‘ಎಕ್ಸ್’ ಮಾಡಿರುವ ಅವರು, ‘ಬಿಜೆಪಿ ಮತ್ತು ಆರೆಸ್ಸೆಸ್ ಪರಿವಾರ ಬಹಿರಂಗವಾಗಿ ಮುಸ್ಲಿಮರ ವಿರುದ್ಧ ಮಾತ್ರ ಹರಿಹಾಯ್ದರೂ ಅಂತರಂಗದಲ್ಲಿ ಅದು ಶೂದ್ರರು ಮತ್ತು ದಲಿತರ ವಿರುದ್ಧವಾಗಿದೆ. ಬಾಯಿಯಲ್ಲಿ ಹಿಂದೂ ನಾವೆಲ್ಲರೂ ಒಂದು ಎನ್ನುವ ಮಂತ್ರವನ್ನು ಪಠಿಸುವ ಸಂಘ ಪರಿವಾರದ ನಾಯಕರು ಶೂದ್ರರು ಮತ್ತು ದಲಿತರನ್ನು ಬಡಿಯಲು ಕಂಕುಳಲ್ಲಿ ಬಡಿಗೆ ಇಟ್ಟುಕೊಂಡಿರುತ್ತಾರೆ’ ಎಂದಿದ್ದಾರೆ.

‘ಗೂಳಿಹಟ್ಟಿ ಶೇಖರ್ ಅವರಂಥ ದಲಿತ ಸಮುದಾಯದ ನಾಯಕರಿಗೆ ಅಂಬೇಡ್ಕರ್ ಅವರ ಚಿಂತನೆ ಮತ್ತು ಸಂವಿಧಾನ ಮಾತ್ರ ರಕ್ಷಣೆ ನೀಡಬಹುದೇ ಹೊರತು ಸಂಘ ಪರಿವಾರದ ಸಾವರ್ಕರ್, ಗೋಳ್ವಾಲ್ಕರ್ ಚಿಂತನೆಗಳಲ್ಲ. ಶೇಖರ್ ಅವರು ತನ್ನ ಅನುಭವದಿಂದ ಪಾಠ ಕಲಿಯಲಿ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.