ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಜಿಲ್ಲಾ ಮಂತ್ರಿಗಳಿಲ್ಲದೆ, ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಿದ್ದಾರೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಇನ್ನೂ ಇದೆಯೇ? ಎಂದು ಟ್ವೀಟ್ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತರಲಾಗಿದ್ದ ಹಲವು ಯೋಜನೆಗಳಿಗೆ ಈಗಿನ ಸರ್ಕಾರ ಅನುದಾನ ಕಡಿತಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಅವರು, ಕೇಂದ್ರ ಸರ್ಕಾರ ಕರ್ನಾಟಕದ ವಿಚಾರದಲ್ಲಿ ನಿರ್ಲಕ್ಷ ಧೋರಣೆ ತಳೆದಿದೆ ಎಂದು ದೂರಿದ್ದಾರೆ.
ಯಡಿಯೂರಪ್ಪನವರದು ಜಾಸ್ತಿ ಮಾತನಾಡುತ್ತಾರೆ. ಕೇಂದ್ರದ ಮೇಲೆ ಏಕೆ ಒತ್ತಡ ಹೇರುತ್ತಿಲ್ಲ? ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರದಿಂದ ಇವತ್ತಿನವರೆಗೂ ಒಂದು ರೂಪಾಯಿ ನೀಡಿಲ್ಲ. ಪ್ರಧಾನಿಗಳೇ ಸ್ವತಃ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಇಬ್ಬರು ಸಚಿವರನ್ನ ಕಳುಹಿಸಿದ್ದೇವೆ ಅಂತಾರೆ. ಅವರೇನಾದ್ರೂ ಪರಿಹಾರ ಘೋಷಿಸಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ಯಡಿಯೂರಪ್ಪನವರು ಪ್ರವಾಹ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ವಿಧಾನ ಮಂಡಲ ಅಧಿವೇಶನ ಕರೆಯಬೇಕು. ಸರ್ಕಾರ ಕೂಡಲೇ ಬರ ಪ್ರದೇಶಗಳನ್ನು ಘೋಷಿಸಿ, ಅಗತ್ಯ ಪ್ರಮಾಣದ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಮುಂದುವರಿದು,ಯಡಿಯೂರಪ್ಪನವರು ಪ್ರಧಾನಿ ಅವರಿಗೆ ತುಂಬಾ ಹೆದರುತ್ತಾರೆ ಎಂದಿರುವ ಸಿದ್ದರಾಮಯ್ಯ, ಅವರಿಗೆ ಭಯವಿದ್ದರೆ ಸರ್ವ ಪಕ್ಷ ನಿಯೋಗವನ್ನಾದರೂ ಕರೆದುಕೊಂಡು ಹೋಗಲಿ. ಪ್ರಧಾನಿಯವರ ಬಳಿ ನಾವೇ ಮಾತಾಡುತ್ತೇವೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಮಾಡಿರುವ ಸರಣಿ ಟ್ವೀಟ್ಗಳು ಇಲ್ಲಿವೆ
ನಮ್ಮ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಈಗಿನ ಸರ್ಕಾರ ರದ್ದುಪಡಿಸುವ, ನಿರ್ಲಕ್ಷಿಸುವ ದುರಾಲೋಚನೆ ಮಾಡಿದರೆ ರಾಜ್ಯದ ಬಡಜನತೆ ದಂಗೆ ಏಳಬಹುದು,ಎಚ್ಚರ ಇರಲಿ.
— Siddaramaiah (@siddaramaiah) August 17, 2019
ಇಂತಹ ಜನವಿರೋಧಿ ನಿಲುವುಗಳನ್ನು ನಾವು ಸಹಿಸಿಕೊಳ್ಳುವವರಲ್ಲ, ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ.@INCKarnataka pic.twitter.com/NKvOa8YUTX
ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ , ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವೂ,
— Siddaramaiah (@siddaramaiah) August 17, 2019
ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ.
ಸ್ವಾಭಿಮಾನಿ,
ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು.@INCKarnataka
.@BJP4Karnataka govt is either downsizing or neglecting few pro-people schemes that was started by our govt. Such move shall be condemned & wide-spread protests have to be carried out to protect the interests of common man.@INCKarnataka
— Siddaramaiah (@siddaramaiah) August 17, 2019
1/2
These are the schemes that is acting as a buffer support in this economic slowdown which is a result of @narendramodi's shortsighted & careless approach towards policy making.
— Siddaramaiah (@siddaramaiah) August 17, 2019
Any effect to our pro-poor schemes shall disturb the livelihood of many families.@INCKarnataka
2/2
None of the previous govts or PMs, including Shri. Vajpayee, had ignored Karnataka during Natural calamities. But the attitude of @narendramodi towards Ktaka & @BSYBJP, inspite of 25 MPs, is disgraceful.
— Siddaramaiah (@siddaramaiah) August 17, 2019
We Kannadigas shall never tolerate this callous attitude.@INCKarnataka
ನಮ್ಮ ಸರ್ಕಾರ ರಾಜ್ಯದಲ್ಲಿ ಬಿಪಿಎಲ್ ಕಾರ್ಡುದಾರ 4 ಕೋಟಿ ಜನರಿಗೆ ಅನ್ನಭಾಗ್ಯ ಯೋಜನೆಯಡಿ 7 ಕೆಜಿ ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗೊಳಿಸಿತ್ತು. ರಾಜ್ಯ ಬಿಜೆಪಿ ಸರ್ಕಾರ ಈ ಅಕ್ಕಿಯನ್ನು ಕಡಿಮೆ ಮಾಡಲು ಚರ್ಚೆ ನಡೆಸಿದೆ ಎಂಬ ಮಾಹಿತಿ ಬಂದಿದೆ. ಈ ರೀತಿಯೇನಾದರೂ ಮಾಡಿದರೆ ನಾನು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇನೆ. #MyPressconference
— Siddaramaiah (@siddaramaiah) August 17, 2019
ಅನ್ನಭಾಗ್ಯ ಯೋಜನೆಯ ಕಡಿತ ಮಾಡಿದ ಅಕ್ಕಿ ಹಣವನ್ನು ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ರೈತರಿಗೆ 4 ಸಾವಿರ ಕೊಡಲು ನಮ್ಮದೇನು ಅಡ್ಡಿ ಇಲ್ಲ, ಆದರೆ, ಬಡವರ ಅಕ್ಕಿ ಕಡಿತ ಮಾಡಿ ಹಣ ನೀಡುತ್ತೇವೆ ಎನ್ನುವುದು ಬಡವರ ವಿರೋಧಿ ಧೋರಣೆಯಾಗುತ್ತದೆ.#MyPressconference
— Siddaramaiah (@siddaramaiah) August 17, 2019
ಅನ್ನಭಾಗ್ಯ ಯೋಜನೆ ಜಾರಿಗೆ ಬಂದ ಮೇಲೆ
— Siddaramaiah (@siddaramaiah) August 17, 2019
ಗುಳೆ ಪದ್ಧತಿ ಕಡಿಮೆ ಆಗಿದೆ. ಬಡವರು ಎರಡು ಹೊತ್ತು ಊಟ ಮಾಡುತ್ತಿದ್ದಾರೆ. ಇದು ಇಡೀ ದೇಶದಲ್ಲಿ ಮೆಚ್ಚುಗೆ ಪಡೆದಿರುವ ಕಾರ್ಯಕ್ರಮ.
ಹಾಗಾಗಿ ಅಕ್ಕಿ ಕಡಿತಗೊಳಿಸುವ ಆಲೋಚನೆಯೇನಾದರೂ ಯಡಿಯೂರಪ್ಪನವರಿಗೆ ಇದ್ದಲ್ಲಿ ತಕ್ಷಣವೇ ಅದನ್ನು ಕೈಬಿಡಲಿ.
ಇಂದಿರಾ ಕ್ಯಾಂಟೀನ್ಗೆ ಸರ್ಕಾರ ಹಣ ನೀಡುತ್ತಿಲ್ಲ. ಬಿಬಿಎಂಪಿಯವರೇ ನಿರ್ವಹಿಸಬೇಕು ಎಂದು ಸರ್ಕಾರ ಹೇಳುತ್ತಿದೆ. ಕ್ಯಾಂಟೀನ್ ನಿರಂತರವಾಗಿ ನಡೆಯಬೇಕಾದರೆ, ಅಲ್ಲಿ ಗುಣಮಟ್ಟದ ಆಹಾರ ಸಿಗಬೇಕಾದರೆ ಇಂದಿರಾ ಕ್ಯಾಂಟೀನ್ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಬೇಕು.
— Siddaramaiah (@siddaramaiah) August 17, 2019
ಬಡವರಿಗೆ ಕಡಿಮೆ ದರದಲ್ಲಿ ಪೌಷ್ಟಿಕ ಆಹಾರ ಸಿಗಬೇಕು ಎಂದು ಇಂದಿರಾ ಕ್ಯಾಂಟೀನ್ ಯೋಜನೆ ಜಾರಿ ಮಾಡಲಾಗಿದೆ.
— Siddaramaiah (@siddaramaiah) August 17, 2019
ಇದು ನಮ್ಮ ಸರ್ಕಾರದ ಆದ್ಯತೆಯ ಕಾರ್ಯಕ್ರಮ. ಬಡಜನರ ಹಸಿವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ವರ್ಷಕ್ಕೆ ರೂ.2,000 ಕೋಟಿ ಹಣ ದೊಡ್ಡ ಹೊರೆಯಾಗಲಾರದು. ಈ ಕೂಡಲೇ ಬಿಬಿಎಂಪಿಗೆ ಅನುದಾನ ಬಿಡುಗಡೆ ಮಾಡಲಿ.
ಇವತ್ತಿನವರೆಗೆ ಬರ ಪೀಡಿತ ಪ್ರದೇಶಗಳ ಘೋಷಣೆ ಆಗಿಲ್ಲ. ಬರ ಪೀಡಿತ ಅಂತ ಘೋಷಣೆ ಮಾಡದೆ ಇದ್ದರೆ ಪರಿಹಾರ ಪಡೆಯಲು ಆಗುವುದಿಲ್ಲ. ಮಳೆಯಾಗದೆ ಬಿತ್ತನೆ ಮಾಡಿರುವ ಬೆಳೆ ಹಾಳಾಗಿದೆ. ಕೆಲವೆಡೆ ಬಿತ್ತನೆ ಸಹ ಆಗ್ತಿಲ್ಲ. ಮಳೆ ಇಲ್ಲದೆ ಜಾನುವಾರುಗಳುಗೆ ಮೇವಿಲ್ಲದಂತಾಗಿದೆ.
— Siddaramaiah (@siddaramaiah) August 17, 2019
ಸರ್ಕಾರ ಕೂಡಲೇ ಬರ ಪ್ರದೇಶಗಳನ್ನ ಘೋಷಿಸಿ, ಅಗತ್ಯ ಪ್ರಮಾಣದ ಅನುದಾನ ಬಿಡುಗಡೆ ಮಾಡಬೇಕು.
— Siddaramaiah (@siddaramaiah) August 17, 2019
ದನಕರುಗಳಿಗೆ ಮೇವು ಕೊಡುತ್ತಿಲ್ಲ, ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ರೈತರಿಗೆ, ಬಡವರಿಗೆ ಸಹಾಯ ಮಾಡುತ್ತಿಲ್ಲ. ಹಾಗಿದ್ದಲ್ಲಿ ಈ ಸರ್ಕಾರ ಯಾಕೆ ಇರಬೇಕು?
ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಜಿಲ್ಲಾ ಮಂತ್ರಿಗಳಿಲ್ಲದೆ, ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಿದ್ದಾರೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಇನ್ನೂ ಇದೆಯೇ? ಯಡಿಯೂರಪ್ಪನವರ ಏಕಚಕ್ರಾಧಿಪತ್ಯದಲ್ಲಿ ಸಂವಿಧಾನ, ಕಾನೂನು ಇವುಗಳಿಗೆ ಬೆಲೆ ಇಲ್ಲದಂತಾಗಿ, ರಾಜ್ಯದ ಜನರ ಕಷ್ಟ ಕೇಳುವವರಿಲ್ಲ.
— Siddaramaiah (@siddaramaiah) August 17, 2019
ಇಂಥ ನಿರ್ಲಜ್ಜ ಸರ್ಕಾರವನ್ನೇ ನಾನು ಎಂದೂ ನೋಡಿಲ್ಲ.
ಯಡಿಯೂರಪ್ಪನವರದು ಮಾತು ಮಾತ್ರ ಜಾಸ್ತಿ. ಅವರು ಕೇಂದ್ರದ ಮೇಲೆ ಏಕೆ ಒತ್ತಡ ಹೇರುತ್ತಿಲ್ಲ? ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರದಿಂದ ಇವತ್ತಿನವರೆಗೂ ಒಂದು ರೂಪಾಯಿ ನೀಡಿಲ್ಲ. ಪ್ರಧಾನಿಗಳೇ ಸ್ವತಃ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಇಬ್ಬರು ಸಚಿವರನ್ನ ಕಳುಹಿಸಿದ್ದೇವೆ ಅಂತಾರೆ. ಅವರೇನಾದ್ರೂ ಪರಿಹಾರ ಘೋಷಿಸಿದ್ದಾರಾ?
— Siddaramaiah (@siddaramaiah) August 17, 2019
ಯಡಿಯೂರಪ್ಪನವರು ಪ್ರಧಾನ ಮಂತ್ರಿಗಳಿಗೆ ತುಂಬಾ ಹೆದರುತ್ತಾರೆ ಎನಿಸುತ್ತಿದೆ. ಅವರಿಗೆ ಭಯವಿದ್ದರೆ ಸರ್ವ ಪಕ್ಷ ನಿಯೋಗವನ್ನಾದರೂ ಕರೆದುಕೊಂಡು ಹೋಗಲಿ, ಪ್ರಧಾನಿಯವರ ಬಳಿ ನಾವೇ ಮಾತಾಡುತ್ತೇವೆ.
— Siddaramaiah (@siddaramaiah) August 17, 2019
ಇಷ್ಟೆಲ್ಲಾ ಆಗಿದೆ ಇದರ ಬಗ್ಗೆ ಚರ್ಚೆಗೆ ವಿಧಾನ ಮಂಡಲ ಅಧಿವೇಶನವನ್ನು ಕರೆಯಬೇಕಿತ್ತು, ಅದನ್ನೂ ಮುಖ್ಯಮಂತ್ರಿಗಳು ಮಾಡಿಲ್ಲ.
ಪ್ರಜಾಪ್ರಭುತ್ವ ವಿರೋಧಿಯಾಗಿ ಸರ್ಕಾರ ರಚನೆ ಆಗಿದೆ. ಸರ್ಕಾರಕ್ಕೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ. ಕಣ್ಣು, ಕಿವಿ ಇಲ್ಲದ ಇಂತಹ ಸರ್ಕಾರವನ್ನ ನಾನು ಎಂದಿಗೂ ನೋಡಿಲ್ಲ.
— Siddaramaiah (@siddaramaiah) August 17, 2019
ಪ್ರಧಾನ ಮಂತ್ರಿಗಳು ರಾಜ್ಯದ ಪ್ರವಾಹದ ಬಗ್ಗೆ ಒಂದೇ ಒಂದು ಮಾತನಾಡಿಲ್ಲ, ರಾಜ್ಯದ ಬಗ್ಗೆ ಏಕಿಷ್ಟು ತಾತ್ಸಾರ?
ಕೇಂದ್ರ ಸರ್ಕಾರ ಕೂಡಲೇ ರೂ.5 ಸಾವಿರ ಕೋಟಿ ನೆರವು ಘೋಷಿಸಲಿ.
Our govt had launched Anna Bhagya to provide 7 Kgs of rice to 4 Cr people having BPL cards. There is a news that current @BJP4Karnataka govt is discussing to reduce the quantum of rice. If something like that happens then I will initiate statewide protest.#MyPressConference
— Siddaramaiah (@siddaramaiah) August 17, 2019
The govt may be planning to downsize Anna Bhagya to fund Kisan Samman. We don't have any objection to give ₹4,000 to the farmers but we oppose the diversion of poor people's scheme.
— Siddaramaiah (@siddaramaiah) August 17, 2019
Even most of the farmers are beneficiaries of Anna Bhagya. This is nothing but anti-poor policy.
______
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.