ಬೆಂಗಳೂರು: ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತರುವ ಪ್ರಸ್ತಾವನೆ ಕೈ ಬಿಡುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಿದ್ದರಾಮಯ್ಯ ಅವರು ತಿದ್ದುಪಡಿ ತಂದರೆ ಆಗಬಹುದಾದ ತೊಂದರೆಗಳ ಬಗ್ಗೆ ವಿವರಿಸಿದರು. ಕಾಯಿದೆಗೆ ತಿದ್ದುಪಡಿ ತಂದು ಬಹುರಾಷ್ಟ್ರೀಯ ಕಂಪನಿಗಳು ಕೃಷಿ ಮಾರುಕಟ್ಟೆ ಪ್ರವೇಶ ಮಾಡಿದರೆ ಸರ್ಕಾರದ ಹಿಡಿತ ಇಲ್ಲದಂತೆ ಆಗುತ್ತದೆ.

ಕೃಷಿ ಉತ್ಪನ್ನಗಳಿಗೆ ದರ ನಿಗಧಿ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳಲು ಅವಕಾಶ ಇಲ್ಲದಂತೆ ಆಗುತ್ತದೆ. ತಿದ್ದುಪಡಿಯಿಂದ ರೈತರಿಗೆ ಆಗುವ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಹೀಗಾಗಿ ನಿರ್ಧಾರ ಮರು ಪರಿಶೀಲಿಸಿ ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಿಗೆ ಹೇಳಿದರು. ಸರ್ಕಾರ ರೈತರ ಪರವಾಗಿರಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.