ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ನಿಯಿಂದ ರ‍್ಯಾಡೊ ವಾಚ್‌ ಗಿಫ್ಟ್!

Published : 21 ಮೇ 2023, 23:32 IST
Last Updated : 21 ಮೇ 2023, 23:32 IST
ಫಾಲೋ ಮಾಡಿ
Comments

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ ಅವರಿಗೆ, ಅವರ ಪತ್ನಿ ರ‍್ಯಾಡೊ ವಾಚ್‌ ಉಡುಗೊರೆಯಾಗಿ ನೀಡಿದ್ದಾರೆ. ಅದೇ ವಾಚ್‌ ಧರಿಸಿದ್ದ ಸಿದ್ದರಾಮಯ್ಯ, ಅದನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಎಂ.ಬಿ. ಪಾಟೀಲ ಅವರಿಗೆ ತೋರಿಸಿ ಸಂತಸ ಹಂಚಿಕೊಂಡಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಅವರು ವಾಚ್‌ ಅನ್ನು ತಮ್ಮ ಎಡಭಾಗದಲ್ಲಿ ಕುಳಿತಿದ್ದ ಎಂ.ಬಿ. ಪಾಟೀಲ ಅವರಿಗೆ ತೋರಿಸಿದರು. ಇದೇ ವೇಳೆ ಬಲಭಾಗದಲ್ಲಿ ಕುಳಿತಿದ್ದ ಶಿವಕುಮಾರ್ ಅವರೂ ಸಿದ್ದರಾಮಯ್ಯ ಅವರ ಕೈಯನ್ನು ಹಿಡಿದು ಹತ್ತಿರಕ್ಕೆ ಎಳೆದುಕೊಂಡು ಆ ವಾಚ್‌ ಅನ್ನು ಕುತೂಹಲದಿಂದ ನೋಡಿದರು.

‘ಸಿದ್ದರಾಮಯ್ಯ ಅವರಿಗೆ ಅವರ ಪತ್ನಿ ವಾಚ್‌ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಆ ಕಾರಣಕ್ಕೆ ಅದನ್ನು ತುಂಬಾ ಪ್ರೀತಿಯಿಂದ ನೋಡುತ್ತಿದ್ದರು. ಇನ್ನು ಮುಂದೆ ಅದೇ ವಾಚ್ ಮಾತ್ರ ಧರಿಸುವಂತೆ ಅವರಿಗೆ ನಾನು ಹೇಳಿದ್ದೇನೆ’ ಎಂದು ಪಾಟೀಲ ಹೇಳಿದರು.

2016ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರಿಗೆ ದುಬೈಯ ಡಾ. ಗಿರೀಶ್ ಚಂದ್ರ ವರ್ಮಾ ಅವರು ಉಡುಗೊರೆಯಾಗಿ ನೀಡಿದ್ದರು ಎನ್ನಲಾದ ವಜ್ರಖಚಿತ ಹ್ಯೂಬ್ಲೊ ವಾಚ್ ವಿವಾದಕ್ಕೆ ಕಾರಣವಾಗಿತ್ತು. ಆ ನಂತರ ಸಿದ್ದರಾಮಯ್ಯ ಅವರು ಆ ವಾಚ್‌ನ್ನು ರಾಜ್ಯದ ಆಸ್ತಿ ಎಂದು ಘೋಷಿಸಿ ವಿಧಾನಸಭೆ ಸಚಿವಾಲಯದಲ್ಲಿ ಠೇವಣಿ ಇಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT