ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೇರೆಯವರು ಸಿಎಂ ಆಗುವ ವಿಚಾರ ಅಪ್ರಸ್ತುತ: ಸಚಿವ ಭೋಸರಾಜು

Published : 3 ಸೆಪ್ಟೆಂಬರ್ 2024, 11:25 IST
Last Updated : 3 ಸೆಪ್ಟೆಂಬರ್ 2024, 11:25 IST
ಫಾಲೋ ಮಾಡಿ
Comments

ಧಾರವಾಡ: ‘ಸಿದ್ದರಾಮಯ್ಯ ಅವರು ಪ್ರಸ್ತುತ ಮುಖ್ಯಮಂತ್ರಿಯಾಗಿದ್ದಾರೆ. ಬೇರೆಯವರು ಮುಖ್ಯಮಂತ್ರಿಯಾಗುವ ವಿಚಾರ ಈಗ ಅಪ್ರಸ್ತುತ’ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಭೋಸರಾಜು ಪ್ರತಿಕ್ರಿಯಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಆರ್‌.ವಿ.ದೇಶಪಾಂಡೆ ಅವರು ಎಂಟು ಬಾರಿ ಶಾಸಕರಾಗಿ ಆಯ್ಕೆಯಾದವರು. ತಾನು ಹಿರಿಯ ಇದ್ದೇನೆ, ಸಿದ್ದರಾಮಯ್ಯ ಒಪ್ಪಿದರೆ ತಾನೂ ಸಿ.ಎಂ ಆಗಬಹುದು ಎಂದು ಸುಮ್ಮನೆ ಹೇಳಿದ್ದಾರೆ. ಹೈಕಮಾಂಡ್‌, ಶಾಸಕರು, ಸಂಸದರು ಎಲ್ಲರೂ ಸಿದ್ದರಾಮಯ್ಯ ಬೆಂಬಲವಾಗಿ ನಿಂತಿದ್ಧಾರೆ. ಸಿದ್ದರಾಮಯ್ಯ ವಿರುದ್ಧ ಪ್ರಕರಣ ಇಲ್ಲ. ಕೋರ್ಟ್‌ನಲ್ಲಿ ಏನೂ ಆಗುವುದಿಲ್ಲ’ ಎಂದು ಉತ್ತರಿಸಿದರು.

‘ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ರಾಜ್ಯದಲ್ಲಿ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್‌ ವಿತರಿಸಲು ಕ್ರಮ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಸರ್ಕಾರಿ ಪ್ರೌಢಶಾಲೆಗಳಿಗೆ ಟೆಲಿಸ್ಕೋಪ್‌ ವಿತರಿಸಲಾಗುವುದು. ಬೆಂಗಳೂರಿನಲ್ಲಿ ₹300 ಕೋಟಿ ವೆಚ್ಚದಲ್ಲಿ ‘ಸೈನ್ಸ್‌ ಸಿಟಿ’ ನಿರ್ಮಿಸಲು ಉದ್ದೇಶಿಸಲಾಗಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯವರು (ಕೆಐಎಡಿಬಿ) ದೇವನಹಳ್ಳಿ ಸಮೀಪ 30 ಎಕರೆ ಜಾಗ ಒದಗಿಸಿದ್ಧಾರೆ’ ಎಂದು ಮಾಹಿತಿ ನೀಡಿದರು.

‘ಚಿತ್ರದುರ್ಗ, ರಾಮನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ವಿಜ್ಞಾನ ಕೇಂದ್ರ ಸ್ಥಾಪನೆಗೆ ಕ್ರಮ ವಹಿಸಲಾಗಿದೆ. ಮುಂದಿನ ವರ್ಷ ಬಾಕಿ ನಾಲ್ಕು ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ಸ್ಥಾಪಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT