ಮೈಸೂರು: ನನ್ನ ಕೊನೆಯ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ತಾಲ್ಲೂಕಿನ ವರುಣ ಹೋಬಳಿಯ ವರಕೋಡು ಗ್ರಾಮದಲ್ಲಿ ಶುಕ್ರವಾರ ಬೀರೇಶ್ವರ ದೇವರ ದೇವಸ್ಥಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಾನು ರಾಜಕೀಯದಲ್ಲಿ ಸೋಲು, ಗೆಲುವು ಎರಡನ್ನೂ ಕಂಡಿದ್ದೇನೆ. ಆದರೆ ಜನ ಸೇವೆ ಮಾಡುವುದನ್ನು ಮರೆತಿಲ್ಲ. ಕೈಲಾದಷ್ಟು ಜನ ಸೇವೆ ಮಾಡಿಕೊಂಡು ಬರುತ್ತಿದ್ದೇನೆ ಎಂದರು.

ನಾನು ಕ್ಷೇತ್ರಕ್ಕೆ ಈಗ ಜಾಸ್ತಿ ಬರಲು ಆಗುತ್ತಿಲ್ಲ. ಯತೀಂದ್ರ ಸಿದ್ದರಾಮಯ್ಯ ಕ್ಷೇತ್ರವನ್ನು ನೋಡಿಕೊಳ್ಳುತ್ತಾನೆ. ಅಭಿವೃದ್ಧಿ ದೃಷ್ಟಿಯಿಂದ ಅವನು ಹೇಳಿದ ಕೆಲಸವನ್ನೆಲ್ಲ ಮಾಡಿಕೊಡುತ್ತೇನೆ. ನೀವು ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಮುಂದೆಯೂ ಬೆಳೆಸಬೇಕು. ಬೆಳೆಸುತ್ತೀರಿ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಹುಂಡಿಗಳು ನನಗೆ ಪ್ರಿಯವಾದ ಊರುಗಳು. ನನಗೆ ರಾಜಕೀಯ ಜೀವನ ಸಿಕ್ಕಿದ್ದೇ ಇಲ್ಲಿಂದ. ಶಾಸಕ, ಸಚಿವ, ಮುಖ್ಯಮಂತ್ರಿ ಆಗಿದ್ದೇ ಇಲ್ಲಿನ ಜನರ ಆಶೀರ್ವಾದದಿಂದ. ಹೀಗಾಗಿ ಮೈಸೂರು ತಾಲ್ಲೂಕಿನ ಜನರನ್ನು ಮರೆಯಲಾಗದು ಎಂದರು.

ಗ್ರಾಮದ ಮುಖಂಡರು ಸಿದ್ದರಾಮಯ್ಯ ಅವರಿಗೆ ಬೆಳ್ಳಿಗದೆ ನೀಡಿ, ರೇಷ್ಮೆ ಶಾಲು ಹೊದಿಸಿ, ರೇಷ್ಮೆಗೂಡಿನ ಹಾರ ಹಾಕಿ ಸನ್ಮಾನಿಸಿದರು. ಶಿವಾನಂದ ಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ. ವಿಜಯ್ಕುಮಾರ್ ಪಾಲ್ಗೊಂಡಿದ್ದರು.

‘ಶಾಸಕ ಎಚ್.ವೈ.ಮೇಟಿ ಕುಟುಂಬಕ್ಕೆ ಟಿಕೆಟ್’

ಬೆಳಗಾವಿ/ಬಾಗಲಕೋಟೆ: ‘ಶಾಸಕ ಎಚ್.ವೈ.ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ನಿಂದ ಮೇಟಿ ಕುಟುಂಬದವರಿಗೆ ಟಿಕೆಟ್ ಕೊಡುತ್ತೇವೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

‘ಉಪಚುನಾವಣೆಯನ್ನು ಗೆಲ್ಲಲು ಎಲ್ಲ ತಯಾರಿ ಪೂರ್ಣಗೊಂಡಿದೆ. ಪಕ್ಷದ ಹೈಕಮಾಂಡ್ ಹಾಗೂ ಕುಟುಂಬದವರ ನಿರ್ಧಾರ ಆಧರಿಸಿ, ಮೇಟಿ ಕುಟುಂಬದ ಒಬ್ಬರಿಗೆ ಟಿಕೆಟ್ ನೀಡುತ್ತೇವೆ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

ಬಾಗಲಕೋಟೆಯಲ್ಲಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿ, ‘ಉಪಚುನಾವಣೆಗೆ ಸ್ಪರ್ಧಿಸಲು ಸಾಕಷ್ಟು ಅಭ್ಯರ್ಥಿಗಳಿದ್ದಾರೆ. ಬೇರೆಯವರಿಗೆ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ. ಸಿ.ಎಂ., ಕೆಪಿಸಿಸಿ ಅಧ್ಯಕ್ಷ, ಹೈಕಮಾಂಡ್ ಚರ್ಚಿಸಿ, ಅಭ್ಯರ್ಥಿ ಹೆಸರು ಅಂತಿಮವಾಗಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.