ಚೇತನಹಳ್ಳಿ (ಚಿಕ್ಕಮಗಳೂರು): ಕಾಫಿ ಕಿಂಗ್ ಎಂದೇ ಖ್ಯಾತರಾಗಿದ್ದ ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರ ಅಂತ್ಯಕ್ರಿಯೆ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಬುಧವಾರ ಸಂಜೆ ನೆರವೇರಿತು.

ಚೇತನಹಳ್ಳಿ ಎಸ್ಟೇಟ್‌ನಲ್ಲಿ ಸಿದ್ಧಾರ್ಥ ಅವರ ಕುಟುಂಬಸ್ಥರು ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿದರು. ಸಿದ್ಧಾರ್ಥ ಅವರ ಇಬ್ಬರು ಪುತ್ರರು ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಚೇತನಹಳ್ಳಿ ಎಸ್ಟೇಟ್‌ನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಈ ವೇಳೆ ಕುಟುಂಬಸ್ಥರು, ಸಂಬಂಧಿಕರು, ಸ್ನೇಹಿತರು, ಹಿತೈಷಿಗಳು ಹಾಗೂ ಚೇತನಹಳ್ಳಿಯ ಗ್ರಾಮಸ್ಥರು ಇದ್ದರು.

ನೂಕುನುಗ್ಗಲು ಉಂಟಾಗದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.