ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರ ಅಸ್ತಿತ್ವದಲ್ಲಿದೆಯೇ? – ಸಿದ್ದರಾಮಯ್ಯ

Last Updated 29 ಮಾರ್ಚ್ 2021, 19:05 IST
ಅಕ್ಷರ ಗಾತ್ರ

ಬೆಂಗಳೂರು: ‘ಸಿ.ಡಿ ಹಗರಣದ ಯುವತಿ ತನಗೆ ಪ್ರಾಣ ಭಯ ಇದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಬರೆದಿದ್ದಾರೆ ಎನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ. ಯಡಿಯೂರಪ್ಪನವರೇ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸರಣಿ ಟ್ವೀಟ್‌ ಮಾಡಿರುವ ಅವರು, ‘ಸಂತ್ರಸ್ತ ಯುವತಿ ಆರಂಭದ ಆಡಿಯೊದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದಿದ್ದಳು. ಈಗ ತನಗೆ ಪ್ರಾಣಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆಕೆಯ ಪ್ರಾಣಕ್ಕೆ ಅಪಾಯ ಎದುರಾದರೆ ಇಡೀ ಸರ್ಕಾರವೇ ಹೊಣೆಯಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.

‘ಮುಖ್ಯ ನ್ಯಾಯಮೂರ್ತಿಗೆ ಬರೆದ ಪತ್ರದಲ್ಲಿ ಎಸ್‌ಐಟಿ ಮೇಲೆಯೇ ಅಪನಂಬಿಕೆ ವ್ಯಕ್ತಪಡಿಸಿರುವುದು ಮಾತ್ರವಲ್ಲ, ಅವರು ಸಾಕ್ಷ್ಯನಾಶ ಮಾಡುತ್ತಿದ್ದಾರೆ. ತನ್ನ ವಿರೋಧಿಗಳ ಜೊತೆ ಶಾಮೀಲಾಗಿದ್ದಾರೆ ಎಂದೆಲ್ಲ ಸಂತ್ರಸ್ತೆ ಆರೋಪಿಸಿರುವುದು ಗಂಭೀರ ವಿಷಯ. ಸಂತ್ರಸ್ತೆ ನಿರಂತರ ವಿಡಿಯೊ, ಪತ್ರಗಳನ್ನು ಬಿಡುಗಡೆ ಮಾಡುತ್ತಿದ್ದರೆ, ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸರು ನಿರಂತರ ಸಭೆ ನಡೆಸುತ್ತಿದ್ದಾರೆ. ಫಲಿತಾಂಶ ಏನು’ ಎಂದೂ ಪ್ರಶ್ನಿಸಿದ್ದಾರೆ.

‘ಸಿ.ಡಿ ಬಹಿರಂಗಗೊಂಡು 27 ದಿನಗಳು ಕಳೆದರೂ ಹಗರಣದ ಕೇಂದ್ರ ವ್ಯಕ್ತಿಯಾದ ಸಂತ್ರಸ್ತ ಯುವತಿಯ ವಿಚಾರಣೆ ನಡೆಸಲು ಸಾಧ್ಯವಾಗದ ಪೊಲೀಸರ ವೈಫಲ್ಯಕ್ಕೆ ಯಾರು ಹೊಣೆ, ಅವರ ಮೇಲೆ ಪ್ರಭಾವ ಬೀರುತ್ತಿರುವವರು ಯಾರು, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದು ಬಿದ್ದಿರುವುದಕ್ಕೆ ಬೇರೆ ಸಾಕ್ಷಿ ಬೇಕೇ’ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT