ವಿಜಯಪುರ: ‘ಖತಲ್‌ರಾತ್ರಿ’ ಮಾಡುವವರೇ ಕಾಂಗ್ರೆಸ್ ಪಕ್ಷದವರು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಸಿಂದಗಿ ಮತಕ್ಷೇತ್ರದ ಕನ್ನೂಳ್ಳಿ ಗ್ರಾಮದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ಅಂಗವಾಗಿ ನಡೆದರೋಡ್ ಶೋ ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಸ್ವಾರ್ಥ ರಾಜಕಾರಣ ಮಾಡಿ, ಗಳಿಸಿದ್ದ ಹಣವನ್ನು ಹಂಚುತ್ತಾರೆ ಎಂದು ದೂರಿದರು.

‘ಡಿಕೆಶಿವಿವಿಧ ಉಪ ಚುನಾವಣೆಗಳಲ್ಲಿ ಗೋಣಿ ಚೀಲದಲ್ಲಿ ಹಣ ಹಂಚಿದ್ದಾರೆ. ಅವರ ಅನುಭವವನ್ನು ಹೇಳುವ ಮೂಲಕ ಬಿಜೆಪಿ ಮೇಲೆ ವಿನಾಕಾರಣ ಆರೋಪ ಮಾಡುತ್ತಿದ್ದಾರೆ’ ಎಂದು ಕಿಡಿಕಾರಿದರು.

‘ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಅಷ್ಟೆ ಸತ್ಯ ಸಿಂದಗಿ ಹಾಗೂ ಹಾನಗಲ್ ಕ್ಷೇತ್ರಗಳಲ್ಲಿ ಗೆಲುವು. ಅಷ್ಟೇ ಅಲ್ಲ ಮುಂಬರುವ 2023ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿಯೂ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.