ಶಿರಸಿ: ‘ರಾಜ್ಯದ ಕಾಂಗ್ರೆಸ್ ಸರ್ಕಾರವು ಮಳೆ ಮಾಪನ ಕೇಂದ್ರಗಳನ್ನು ದುರಸ್ತಿ ಮಾಡದ ಕಾರಣ ರೈತರಿಗೆ ಬೆಳೆವಿಮೆ ಲಭಿಸುವಲ್ಲಿ ಅನ್ಯಾಯ ಆಗುವುದನ್ನು ಖಂಡಿಸಿ ಏ.15, 16 ರಂದು ಜಿಲ್ಲೆಯ ಎಲ್ಲ ತಹಶೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಸ್. ಹೆಗಡೆ ಎಚ್ಚರಿಸಿದರು.

ನಗರದ ದೀನ ದಯಾಳ ಸಭಾಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಬೆಳೆವಿಮೆ ವಿಳಂಬವಾಗಲು ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ’ ಎಂದರು.

ಜಿಲ್ಲಾ ಘಟಕದ ವಕ್ತಾರ ಸದಾನಂದ ಭಟ್ ಮಾತನಾಡಿ, ‘ತಾಳಗುಪ್ಪ-ಶಿರಸಿ-ಮುಂಡಗೋಡ ರೈಲು ಮಾರ್ಗದ ವರದಿ ಸಲ್ಲಿಕೆಗೆ ಮಾರ್ಚ್ 30 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ನಲ್ಲಿ ರೈಲ್ವೆ ಮಂಡಳಿ ಸಭೆಯಲ್ಲಿ ಚರ್ಚೆಯಾಗಲಿದೆ. ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಪುನರ್ ವಿಮರ್ಶೆಗೂ ಚಿಂತನೆ ನಡೆದಿದೆ’ ಎಂದು ಹೇಳಿದರು.

ಆನಂದ ಸಾಲೇರ, ಸದಾನಂದ ಭಟ್, ರಮಾಕಾಂತ ಭಟ್, ನಂದನ ಸಾಗರ, ಅನಂತಮೂರ್ತಿ ಹೆಗಡೆ, ಶ್ರೀರಾಮ ನಾಯ್ಕ, ಉಷಾ ಹೆಗಡೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-20-468510394

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.