ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಪಹರಣ ಪ್ರಕರಣ | ಭವಾನಿಗೆ ಎಸ್‌ಐಟಿ ನೋಟಿಸ್‌: ನಾಳೆ ವಿಚಾರಣೆಗೆ ಹಾಜರಾಗಲು ಸೂಚನೆ

Published 31 ಮೇ 2024, 6:28 IST
Last Updated 31 ಮೇ 2024, 6:28 IST
ಅಕ್ಷರ ಗಾತ್ರ

ಹಾಸನ: ಕೆ.ಆರ್‌. ನಗರ ತಾಲ್ಲೂಕಿನ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 1ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಎಸ್‌ಐಟಿ ತಂಡ, ಭವಾನಿ ರೇವಣ್ಣ ಅವರಿಗೆ ಮತ್ತೊಂದು ನೋಟಿಸ್‌ ಜಾರಿಗೆ ಮಾಡಿದೆ.

‘ಮೊದಲು ನೀಡಿದ್ದ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ತಾವು, ತನಿಖೆಗೆ ಅವಶ್ಯವಿದ್ದರೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಇರುವುದಾಗಿ ತಿಳಿಸಿದ್ದೀರಿ. ಆದರೆ, ಈ ಹಿಂದೆ ನೀಡಿದ್ದ ನೋಟೀಸ್‌ಗೆ ನೀವು ಉತ್ತರಿಸಿಲ್ಲ. ಈ ಪ್ರಕರಣದಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡುವ ಅವಶ್ಯಕತೆ ಇದೆ’ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

‘ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ಒಳೆಗೆ ವಿಚಾರಣೆಗೆ ಬರುತ್ತೇವೆ. ಆ ಸಂದರ್ಭದಲ್ಲಿ ಮನೆಯಲ್ಲಿ ಖುದ್ದು ಹಾಜರಿರಬೇಕು’ ಎಂದು ಎಸ್ಐಟಿ ಇನ್‌ಸ್ಪೆಕ್ಟರ್ ಹೇಮಂತ್ ಕುಮಾರ್ ನೀಡಿರುವ ನೋಟಿಸ್‌ನಲ್ಲಿ ಸೂಚಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದು, ಶುಕ್ರವಾರ ವಿಚಾರಣೆ ನಡೆಯಲಿದೆ. ಈ ಮಧ್ಯೆ ಎಸ್‌ಐಟಿ ಖುದ್ದು ಹಾಜರಿರುವಂತೆ ನೋಟಿಸ್‌ ನೀಡಿದ್ದು, ನಿರೀಕ್ಷಣಾ ಜಾಮೀನು ಸಿಗದಿದ್ದರೆ ಬಂಧನ ಭೀತಿ ಎದುರಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT