ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜ್ವಲ್ ಪಾಸ್‌ಪೋರ್ಟ್ ರದ್ದುಪಡಿಸಲು ಎಸ್‌ಐಟಿ ಪತ್ರ

Published 20 ಮೇ 2024, 16:24 IST
Last Updated 20 ಮೇ 2024, 16:24 IST
ಅಕ್ಷರ ಗಾತ್ರ

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಪಡಿಸುವಂತೆ ಕೋರಿ ಎಸ್‌ಐಟಿ (ವಿಶೇಷ ತನಿಖಾ ತಂಡ), ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.

ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣ ದೇಶ ತೊರೆದಿದ್ದು, ಅವರನ್ನು ಪತ್ತೆ ಮಾಡಲು ಎಸ್‌ಐಟಿ ತನಿಖೆ ಮುಂದುವರಿಸಿದೆ.

‘ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಹಾಗೂ ಸಿಐಡಿ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ನೋಟಿಸ್ ನೀಡಿದರೂ ಪ್ರಜ್ವಲ್ ವಿಚಾರಣೆಗೆ ಹಾಜರಾಗಿಲ್ಲ. ಪ್ರಜ್ವಲ್ ಬಂಧನಕ್ಕೆ ನ್ಯಾಯಾಲಯದಿಂದ ವಾರಂಟ್ ಸಹ ಜಾರಿ ಆಗಿದೆ. ಪ್ರಜ್ವಲ್ ಎಲ್ಲಿದ್ದಾರೆ ಎಂಬ ಸುಳಿವು ಇದುವರೆಗೂ ಸಿಕ್ಕಿಲ್ಲ’ ಎಂದು ಎಸ್ಐಟಿ ಮೂಲಗಳು ಹೇಳಿವೆ.

‘ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿಕೊಂಡು ಪ್ರಜ್ವಲ್, ವಿದೇಶಕ್ಕೆ ಹೋಗಿದ್ದಾರೆ. ಈ ಪಾಸ್‌ಪೋರ್ಟ್ ರದ್ದುಪಡಿಸುವಂತೆ ಕೋರಿ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಮೂಲಕ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಬ್ಲೂ ಕಾರ್ನರ್‌ ನೋಟಿಸ್, ನ್ಯಾಯಾಲಯದ ವಾರಂಟ್ ಪ್ರತಿ ಹಾಗೂ ಇತರ ದಾಖಲೆಗಳನ್ನು ಪತ್ರದೊಂದಿಗೆ ಲಗತ್ತಿಸಲಾಗಿದೆ’ ಎಂದು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT