ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ಆಪ್ತನ ತೋಟದ ಮನೆಯಲ್ಲಿ ಮಹಿಳೆಯ ರಕ್ಷಣೆ

Published 4 ಮೇ 2024, 13:49 IST
Last Updated 4 ಮೇ 2024, 13:49 IST
ಅಕ್ಷರ ಗಾತ್ರ

ಮೈಸೂರು: ಹೊಳೆನರಸೀಪುರದ ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣ ಮನೆಯಲ್ಲಿ ಕೆಲಸಕ್ಕಿದ್ದ ಕೆ.ಆರ್‌. ನಗರದ ಮಹಿಳೆಯ ಅಪಹರಣ ಪ್ರಕರಣ ತಿರುವು ಪಡೆದುಕೊಂಡಿದ್ದು, ಹುಣಸೂರು ತಾಲ್ಲೂಕಿನ ಕಾಳೇನಹಳ್ಳಿ ಬಳಿಯಿರುವ ರೇವಣ್ಣ ಆಪ್ತ ಸಹಾಯಕರೊಬ್ಬರ ತೋಟದ ಮನೆಯಲ್ಲಿ ಆಕೆ ಶನಿವಾರ ಪತ್ತೆಯಾಗಿದ್ದಾರೆ.

‘ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ತನ್ನ ತಾಯಿಯನ್ನು ಏ.29 ರಂದು ಎಚ್‌.ಡಿ.ರೇವಣ್ಣ ಅವರ ಸೂಚನೆಯಂತೆ ಸತೀಶ್‌ ಬಾಬು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಆಕೆಯ ಜೀವಕ್ಕೆ ಅಪಾಯವಿದೆ’ ಎಂದು ಮಹಿಳೆಯ ಮಗ ಕೆ.ಆರ್‌ ನಗರ ಠಾಣೆಯಲ್ಲಿ ದೂರು ನೀಡಿದ್ದರು. ಈ ಬಗ್ಗೆ ತನಿಖೆ ಕೈಗೊಂಡ ಎಸ್‌ಐಟಿ ತಂಡ ರೇವಣ್ಣ ಅವರ ಆಪ್ತಸಹಾಯಕ ರಾಜಶೇಖರ್‌ ತೋಟದ ಮನೆಯಲ್ಲಿದ್ದ ಮಹಿಳೆಯನ್ನು ರಕ್ಷಿಸಿದ್ದಾರೆ.

ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬು ಅವರನ್ನು ಮೇ 2 ರಂದು ಪೊಲೀಸರು ಬಂಧಿಸಿದ್ದರು. ಮೇ 3 ರಂದು ಕೆ.ಆರ್.ನಗರ ಜೆ.ಎಂಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT