ಬೆಂಗಳೂರು: ಉನ್ನತ ಶಿಕ್ಷಣದ ಮೇಲೆ ರಾಜ್ಯಗಳು ಹೊಂದಿರುವ ಅಧಿಕಾರವನ್ನು ಮೊಟಕುಗೊಳಿಸಲು ಹೊರಟಿರುವ ಕೇಂದ್ರ ಸರ್ಕಾರದ ನೀತಿ ವಿರುದ್ಧ ಆರು ರಾಜ್ಯ ಸರ್ಕಾರಗಳು ಒಗ್ಗಟ್ಟು ಪ್ರದರ್ಶಿಸಿದ್ದು, ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ರೂಪಿಸಿರುವ ಕರಡು ನಿಯಮಗಳನ್ನು ತಿರಸ್ಕರಿಸಲು ಒಮ್ಮತದ ನಿರ್ಣಯ ಕೈಗೊಂಡಿವೆ.

ನಗರದಲ್ಲಿ ಬುಧವಾರ ನಡೆದ ವಿವಿಧ ರಾಜ್ಯಗಳ ಉನ್ನತ ಶಿಕ್ಷಣ ಸಚಿವರ ಸಮಾವೇಶದಲ್ಲಿ ಕರ್ನಾಟಕವೂ ಸೇರಿ ಆರು ರಾಜ್ಯಗಳ ಸಚಿವರು ಭಾಗವಹಿಸಿದ್ದರು. ವಿಶ್ವವಿದ್ಯಾಲಯಗಳ ಕುಲಪತಿ ನೇಮಕಾತಿಯೂ ಒಳಗೊಂಡಂತೆ ಯುಜಿಸಿ ಬಿಡುಗಡೆ ಮಾಡಿರುವ ಎಲ್ಲ ಕರಡು ನಿಯಮಗಳನ್ನು ತಕ್ಷಣವೇ ಹಿಂಪಡೆಯಬೇಕು. ರಾಜ್ಯ ಸರ್ಕಾರಗಳ ಜತೆ ಸಮಾಲೋಚನೆ ನಡೆಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅಧ್ಯಕ್ಷತೆಯಲ್ಲಿ ನಡೆದ ಸಮಾವೇಶದಲ್ಲಿ ಹಿಮಾಚಲ ಪ್ರದೇಶದ ರೋಹಿತ್ ಠಾಕೂರ್, ಜಾರ್ಖಂಡ್ನ ಸುದಿವ್ಯಕುಮಾರ್, ತೆಲಂಗಾಣದ ಶ್ರೀಧರ್ ಬಾಬು, ತಮಿಳುನಾಡಿನ ಗೋವಿ ಸಿಝಿಯಾನ್, ಕೇರಳದ ಆರ್. ಬಿಂದು ಭಾಗವಹಿಸಿದ್ದರು.

ನಂತರ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ‘ವಿಶ್ವವಿದ್ಯಾಲಯ ಕುಲಪತಿಗಳ ನೇಮಕ ಅಧಿಕಾರವನ್ನು ಆಯಾ ರಾಜ್ಯದ ರಾಜ್ಯಪಾಲರಿಗೆ ನೀಡಲಾಗಿದೆ. ಪ್ರಸ್ತುತ ಕುಲಪತಿಗಳ ನೇಮಕಾತಿಗೆ ರಾಜ್ಯ ಸರ್ಕಾರಗಳೇ ಶೋಧನಾ ಸಮಿತಿ ರಚಿಸುತ್ತಿದ್ದವು. ಕುಲಾಧಿಪತಿಯೂ ಆದ ರಾಜ್ಯಪಾಲರು ಸಮಿತಿಯ ಸದಸ್ಯರನ್ನೂ ಶಿಫಾರಸು ಮಾಡುವ ಅಧಿಕಾರ ಹೊಂದಿದ್ದರು’ ಎಂದರು.

ಹೊಸ ನಿಯಮಗಳ ಪ್ರಕಾರ ರಾಜ್ಯಪಾಲರು ಸೂಚಿಸುವ ವ್ಯಕ್ತಿಯೇ ಶೋಧನಾ ಸಮಿತಿಯ ಅಧ್ಯಕ್ಷರಾಗುತ್ತಾರೆ. ವಿದ್ವಾಂಸರಿಗಷ್ಟೇ ಸೀಮಿತವಾಗಿದ್ದ ಹುದ್ದೆಗಳಲ್ಲಿ ಬೇರೆ ರಾಜ್ಯದವರಿಗೂ ಅವಕಾಶ ಮಾಡಿಕೊಡಲಾಗಿದೆ. ಉದ್ಯಮಿಗಳು, ಸಾರ್ವಜನಿಕ ಆಡಳಿತದ ನೀತಿ, ನಿರೂಪಕರು ಸೇರಿದಂತೆ ಬೇರೆ ಕ್ಷೇತ್ರದಲ್ಲಿರುವ ತಜ್ಞರು ಕುಲಪತಿಗಳಾಗುತ್ತಾರೆ. ಇದು ಉನ್ನತ ಶಿಕ್ಷಣದ ಗುಣಮಟ್ಟ ಕುಸಿತಕ್ಕೆ ನಾಂದಿಯಾಡುತ್ತದೆ. ಸಾರ್ವಜನಿಕ ವಿಶ್ವವಿದ್ಯಾಲಯಗಳು ಬಾಗಿಲು ಮುಚ್ಚಬೇಕಾಗುತ್ತದೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಉತ್ತೇಜನ ದೊರಕಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಒಂದು ರಾಜ್ಯಕ್ಕೂ ಮತ್ತೊಂದು ರಾಜ್ಯಕ್ಕೂ ಪದವಿ ಕೋರ್ಸ್ಗಳ ಆಯ್ಕೆಯಲ್ಲಿ ವಿದ್ಯಾರ್ಥಿಗಳ ಅಭಿರುಚಿ ಭಿನ್ನವಾಗಿರುತ್ತದೆ. ಯುಜಿಸಿ ನಿಯಮ ತಿದ್ದುಪಡಿ ಕರಡು ಪ್ರಕಾರ ಎಲ್ಲ ಪದವಿಗಳಿಗೆ ಪ್ರವೇಶ ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ಕಲಾ ವಿಷಯ ಸೇರಿದಂತೆ ಹಲವು ಕೋರ್ಸ್ಗಳು ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿವೆ. ಇನ್ನು ಪ್ರವೇಶ ಪರೀಕ್ಷೆ ನಡೆಸಿದರೆ ಕೋರ್ಸ್ಗಳನ್ನೇ ಸ್ಥಗಿತಗೊಳಿಸಬೇಕಾಗುತ್ತದೆ ಎಂದು ಸಚಿವ ಸುಧಾಕರ್ ಹೇಳಿದರು.

ಕೇರಳ: 20ಕ್ಕೆ ಎರಡನೇ ಸಮಾವೇಶ

ವಿಧಾನಸಭಾ ಚುನಾವಣೆ ಮತ್ತಿತರ ಕಾರಣಗಳಿಂದ ಮೊದಲ ಸಮಾವೇಶದಲ್ಲಿ ದೆಹಲಿ ಸೇರಿದಂತೆ ಹಲವು ರಾಜ್ಯಗಳ ಉನ್ನತ ಶಿಕ್ಷಣ ಸಚಿವರು ಭಾಗಿಯಾಗಲು ಸಾಧ್ಯವಾಗಿಲ್ಲ. ಹಾಗಾಗಿ, ಕೇರಳದಲ್ಲಿ ಇದೇ ಫೆ.20ರಂದು ಎರಡನೇ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದರು.

ಕರಡು ನಿಯಮಗಳಿಗೆ ಬಿಜೆಪಿಯೇತರ ಹಾಗೂ ಎನ್ಡಿಎ ಮೈತ್ರಿಕೂಟದ ಮಿತ್ರ ಪಕ್ಷಗಳಾದ ಟಿಡಿಪಿ, ಜೆಡಿಯು, ಎಲ್ಜೆಪಿ ಸಹ ವಿರೋಧ ವ್ಯಕ್ತಪಡಿಸಿವೆ. ಪಶ್ಚಿಮ ಬಂಗಾಳ ಸರ್ಕಾರ ತಜ್ಞರ ಸಮಿತಿ ರಚಿಸಿದೆ. ಕರಡು ನಿಯಮಗಳನ್ನೇ ಯುಜಿಸಿ ಅಧಿಕೃತಗೊಳಿಸಿದರೆ ಮುಂದಿನ ನಡೆ ಏನು ಎನ್ನುವ ಕುರಿತು ಕೇರಳ ಸಮಾವೇಶದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಕಾನೂನು ಹೋರಾಟದ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದರು.

ಪ್ರಮುಖ ನಿರ್ಣಯಗಳು

ವಿಶ್ವವಿದ್ಯಾಲಯಗಳ ಕುಲಪತಿ ನೇಮಕದಲ್ಲಿ ರಾಜ್ಯ ಸರ್ಕಾರಗಳ ಪಾತ್ರವೇ ಪ್ರಮುಖವಾಗಿರಬೇಕು

ಕುಲಪತಿ ಆಯ್ಕೆಗೆ ಸಮಿತಿ ರಚಿಸುವ ಅಧಿಕಾರ ಈಗ ಇರುವಂತೆಯೇ ಮುಂದುವರಿಯಬೇಕು

ಶೈಕ್ಷಣಿಕ ವಲಯದ ಹೊರಗಿನವರನ್ನು ಕುಲಪತಿ ಸ್ಥಾನಕ್ಕೆ ಪರಿಗಣಿಸಬಾರದು

ಕುಲಪತಿ ಅರ್ಹತೆಗಳು, ಅವಧಿಯ ಬದಲಾವಣೆಯಿಂದ ಶಿಕ್ಷಣದ ಗುಣಮಟ್ಟಕ್ಕೆ ಅಡ್ಡಿಯಾಗಬಾರದು

ಈಗಿರುವ ಶಿಕ್ಷಕರ ಕಾರ್ಯಕ್ಷಮತೆ ಮೌಲ್ಯಮಾಪನ ಮತ್ತು ಶೈಕ್ಷಣಿಕ ಸೂಚಕ (ಎಪಿಐ) ವ್ಯವಸ್ಥೆ ತೆಗೆದುಹಾಕಬಾರದು

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಉಪ ನಿಮಯಗಳನ್ನು ಮರು
ಪರಿಶೀಲಿಸಬೇಕು

ಯುಜಿಸಿ ಮಾರ್ಗಸೂಚಿ ಅನುಸರಿಸದಿದ್ದರೆ ಕೈಗೊಳ್ಳುವ ಕ್ರಮಗಳು ಪ್ರಜಾಸತ್ತಾತ್ಮಕವಾಗಿ ಇರಬೇಕು

ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಕಡೆಗಣಿಸಿ, ಖಾಸಗಿ ಸಂಸ್ಥೆಗಳಿಗೆ ಉತ್ತೇಜನ ನೀಡುವ ನಿಯಮಗಳನ್ನು ಕೈಬಿಡಬೇಕು

ಉನ್ನತ ಶಿಕ್ಷಣ ಸಂಸ್ಥೆ, ವಿಶ್ವವಿದ್ಯಾಲಯ ಸ್ಥಾಪಿಸಲು ರಾಜ್ಯ ಸರ್ಕಾರ ಹಣ, ಭೂಮಿ ಕೊಡುತ್ತದೆ. ಕುಲಪತಿಗಳನ್ನು ಏಕೆ ನೇಮಕ ಮಾಡಬಾರದು?
ಗೋವಿ ಸಿಝಿಯಾನ್, ತಮಿಳುನಾಡು ಸಚಿವ

ಅಧ್ಯಾಪಕರ ವೇತನ, ಪಿಂಚಣಿ, ಅಭಿವೃದ್ಧಿ ಸೇರಿದಂತೆ ರಾಜ್ಯಗಳು ಉನ್ನತ ಶಿಕ್ಷಣಕ್ಕೆ ದೊಡ್ಡ ಮೊತ್ತದ ಹಣ ವೆಚ್ಚ ಮಾಡುತ್ತಿವೆ. ಆದರೆ, ನಿಯಂತ್ರಣಕ್ಕೆ ಅಧಿಕಾರ ಇಲ್ಲ ಎಂದರೆ ಹೇಗೆ?
ಎಂ.ಸಿ. ಸುಧಾಕರ್, ಕರ್ನಾಟಕದ ಸಚಿವ

ಯುಜಿಸಿ ಕರಡು ನಿಯಮಗಳು ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತವೆ. ಶಿಕ್ಷಣದಲ್ಲಿ ರಾಜ್ಯಗಳ ಸ್ವಾಯತ್ತೆ ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ.
ಶ್ರೀಧರ್ ಬಾಬು, ತೆಲಂಗಾಣ ಮಾಹಿತಿ ತಂತ್ರಜ್ಞಾನ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.