ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಮಾಜಿ ಸಚಿವ ಎಸ್‌.ಎಂ. ಕೃಷ್ಣ ಆರೋಗ್ಯ ಸ್ಥಿರ

Published 29 ಏಪ್ರಿಲ್ 2024, 15:38 IST
Last Updated 29 ಏಪ್ರಿಲ್ 2024, 15:38 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಎಸ್‌.ಎಂ. ಕೃಷ್ಣ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಇಲ್ಲಿನ ಮಣಿಪಾಲ್‌ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಹಿರಿಯ ನಾಯಕ ಎಸ್‌.ಎಂ. ಕೃಷ್ಣ ಅವರು ವಯೋ ಸಹಜ ಕಾಯಿಲೆಗೆ ಚಿಕಿತ್ಸೆ ಪಡೆಯಲು ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಮೂರು ದಿನ ಚಿಕಿತ್ಸೆ ನೀಡಿದ ಬಳಿಕ ಮಣಿಪಾಲ್‌ ಆಸ್ಪತ್ರೆಗೆ ಅವರನ್ನು ಸ್ಥಳಾಂತರ ಮಾಡಲಾಗಿತ್ತು.

ಡಾ. ಸತ್ಯನಾರಾಯಣ ಮೈಸೂರು ಮತ್ತು ವೈದ್ಯಕೀಯ ತಜ್ಞರ ತಂಡ ಚಿಕಿತ್ಸೆ ನೀಡುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಮಣಿಪಾಲ್‌ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT