ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಾರ್ಟ್‌ ಸಿಟಿ: ಜೂನ್‌ಗೆ ಎಲ್ಲ ಕಾಮಗಾರಿ ಪೂರ್ಣ -ನಿರ್ದೇಶಕರಿಂದ ಮಾಹಿತಿ

Last Updated 2 ಸೆಪ್ಟೆಂಬರ್ 2022, 19:31 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ‘ಸ್ಮಾರ್ಟ್‌ ಸಿಟಿ’ ಅನುದಾನದಲ್ಲಿ ಪ್ರಗತಿಯಲ್ಲಿರುವ ಎಲ್ಲ 230 ಕಾಮಗಾರಿಗಳಿಗೆ ತಿಂಗಳುವಾರು ಭೌತಿಕ ಹಾಗೂ ಆರ್ಥಿಕ ಗುರಿಗಳನ್ನು ನಿಗದಿಪಡಿಸಲಾಗಿದ್ದು, 2023ರ ಜೂನ್‌ನೊಳಗೆ ಪೂರ್ಣಗೊಳಿಸಲಾಗುವುದು ಎಂದು ಸ್ಮಾರ್ಟ್‌ ಸಿಟಿ ಅಭಿಯಾನದ ತಾಂತ್ರಿಕ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

‘ನಗರಾಭಿವೃದ್ಧಿ ಸಚಿವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲ 7 ನಗರಗಳಲ್ಲಿ 35 ಸಭೆಗಳನ್ನು ನಡೆಸಿ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಆಯಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಭೆಗಳು ನಡೆದು, ಅನುಷ್ಠಾನದಲ್ಲಿ ಎದುರಾಗುವ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಕಾಲಮಿತಿಯಲ್ಲಿ ಕಾಮಗಾರಿ ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗಿದೆ’ ಎಂದು ಹೇಳಿದ್ದಾರೆ.

2 ವರ್ಷಗಳಲ್ಲಿ ₹3,557 ಕೋಟಿ ವೆಚ್ಚದಲ್ಲಿ 354 ಕಾಮಗಾರಿಗಳು ಮುಕ್ತಾಯವಾಗಿದ್ದು, ₹2,493 ಕೋಟಿ ವೆಚ್ಚದ ಕಾಮಗಾರಿಗಳು ಪ್ರಾರಂಭವಾಗಿವೆ. ಆರ್ಥಿಕ ಪ್ರಗತಿ ಶೇ 86ರಷ್ಟಿದೆ. ಕಾಮಗಾರಿ, ಆರ್ಥಿಕ ಪ್ರಗತಿಯಲ್ಲಿ ರಾಜ್ಯ 3ನೇ ಶ್ರೇಯಾಂಕದಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT