ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪುರಸ್ಕೃತ ನಗರಗಳ ಪಟ್ಟಿಯನ್ನು ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದೆ. ಕರ್ನಾಟಕದ ಮೂರು ನಗರಗಳು ಪ್ರಶಸ್ತಿಗೆ ಪಾತ್ರವಾಗಿವೆ. ನಗರ ಪರಿಸರ ವಿಭಾಗದಲ್ಲಿ ಶಿವಮೊಗ್ಗ ನಗರವು ಪ್ರಶಸ್ತಿಗೆ ಆಯ್ಕೆಯಾಗಿದೆ. ನವೀನ ಕಲ್ಪನೆ ಪ್ರಶಸ್ತಿ ವಿಭಾಗದಲ್ಲಿ ಹುಬ್ಬಳ್ಳಿ–ಧಾರವಾಡ ಪ್ರಶಸ್ತಿ ಪುರಸ್ಕೃತವಾಗಿದೆ. ವಲಯ ಸ್ಮಾರ್ಟ್ ಸಿಟಿ ಪ್ರಶಸ್ತಿ (ದಕ್ಷಿಣ ವಲಯ) ಬೆಳಗಾವಿಗೆ ಲಭಿಸಿದೆ.