ಬೆಂಗಳೂರು: ‘ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದಲ್ಲಿ ದೇಶದಲ್ಲಿ 6ನೇ ಸ್ಥಾನದಲ್ಲಿರುವ ಕರ್ನಾಟಕ, ಮುಂದಿನ ದಿನಗಳಲ್ಲಿ ಮೊದಲ ಸ್ಥಾನ ಪಡೆಯಬೇಕು. ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದ ಉಸ್ತುವಾರಿ ವಹಿಸಿರುವ ವ್ಯವಸ್ಥಾಪಕ ನಿರ್ದೇಶಕರಿಗೆ ಬೈರತಿ ಬಸವರಾಜ ಸೂಚಿಸಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಇಂದಿರಾ ನಗರದಲ್ಲಿರುವ ಕೆಯುಐಡಿಎಫ್‌ಸಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಅವರು ನಡೆಸಿದರು.

ರಾಜ್ಯದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ 2019-20ನೇ ಸಾಲಿನಲ್ಲಿ ₹ 700 ಕೋಟಿ, 2020-21ನೇ ಸಾಲಿನಲ್ಲಿ ₹ 1,300 ಕೋಟಿ ಮತ್ತು 2021-2ನೇ ಸಾಲಿನಲ್ಲಿ ಈವರೆಗೆ ₹ 537 ಕೋಟಿ ವೆಚ್ಚ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ದಾವಣಗೆರೆ, ಶಿವಮೊಗ್ಗ, ತುಮಕೂರು, ಮಂಗಳೂರು, ಹುಬ್ಬಳ್ಳಿ–ಧಾರವಾಡ ಸ್ಮಾರ್ಟ್ ಸಿಟಿ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರು ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.