ಬೆಂಗಳೂರು: ಕೇಂದ್ರ ಸರ್ಕಾರ ರೂಪಿಸಿರುವ ರೀ–ಮ್ಯಾಪ್ಡ್ ಡಿಸ್ಟ್ರಿಬ್ಯೂಷನ್ ಸೆಕ್ಟರ್ ಸ್ಕೀಂ (ಆರ್ಡಿಎಸ್ಎಸ್) ಯೋಜನೆಯ ಮೂಲಕ ಮುಂಬರುವ ದಿನಗಳಲ್ಲಿ ಎಲ್ಲ ಪ್ರಕಾರದ ಗ್ರಾಹಕರಿಗೂ ಸ್ಮಾರ್ಟ್ ಮೀಟರ್ ಅಳವಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಈ ಕುರಿತಂತೆ ಸಚಿವ ಸಂಪುಟ ಸಭೆಗೆ ಪ್ರಸ್ತಾವ ಮಂಡಿಸಲು ಇಂಧನ ಇಲಾಖೆ ಮುಂದಾಗಿದೆ.

‘ಆರ್ಡಿಎಸ್ಎಸ್ ಯೋಜನೆಯನ್ನು ಕೇಂದ್ರ ಸರ್ಕಾರ ಇನ್ನೂ ಎರಡು ವರ್ಷ ವಿಸ್ತರಿಸುವ ಸಾಧ್ಯತೆ ಇದೆ. ಈ ಕಾರಣಕ್ಕೆ ರಾಜ್ಯದಲ್ಲಿ ಹಂತ-ಹಂತವಾಗಿ ಯೋಜನೆ ಜಾರಿಗೆ ಉದ್ದೇಶಿಸಲಾಗಿದೆ. ಆದರೆ, ಯೋಜನೆ ಬಗ್ಗೆ ಸಂಪುಟ ಸಭೆ ನಿರ್ಧಾರ ತೆಗೆದುಕೊಳ್ಳಲಿದೆ. ಯೋಜನೆ ಜಾರಿಯಾದರೆ ಎಲ್ಲ ಗ್ರಾಹಕರಿಗೂ ಸ್ಮಾರ್ಟ್ ಮೀಟರ್ ಬರಲಿದೆ’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

ಸುದ್ದಿಗಾರರ ಜೊತೆ ಬುಧವಾರ ಸಂವಾದ ನಡೆಸಿದ ಅವರು, ‘ಈ ಕುರಿತ ಪ್ರಸ್ತಾವ ಇನ್ನೂ ಪ್ರಾಥಮಿಕ ಹಂತದಲ್ಲಿದೆ’ ಎಂದರು.

‘ಸರ್ಕಾರದ ಅಂಗಸಂಸ್ಥೆಗಳು ಸುಮಾರು ₹15 ಸಾವಿರ ಕೋಟಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಹೀಗಾಗಿ, ಆರ್ಡಿಎಸ್ಎಸ್ ಜಾರಿಗೊಳಿಸಲು ಸಾಧ್ಯವಾಗಿಲ್ಲ. ಈಗ ಕೇಂದ್ರ ಇಂಧನ ಸಚಿವರ ನಿರ್ದೇಶನದ ಮೇರೆಗೆ ಆರಂಭದಲ್ಲಿ ಸರ್ಕಾರಿ ಕಚೇರಿಗಳು, ನಂತರ ಸ್ಥಳೀಯ ಸಂಸ್ಥೆಗಳಿಗೆ ಸ್ಮಾರ್ಟ್ ಮೀಟರ್ ಜಾರಿಗೆ ಉದ್ದೇಶಿಸಲಾಗಿದೆ. ಸ್ಥಳೀಯ ಸಂಸ್ಥೆಗಳಿಗೆ ಶೇ 2ರಷ್ಟು ಸೆಸ್ ವಿಧಿಸಿ, ಆ ಮೂಲಕ ಬಾಕಿ ಸಂಗ್ರಹಿಸುವ ಚಿಂತನೆ ಇದೆ’ ಎಂದರು.

ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಮಾತನಾಡಿ, ‘ರಾಜ್ಯದಲ್ಲಿ ವಿದ್ಯುತ್ ಪ್ರಸರಣ ಮಾರ್ಗದ ಸಾಮರ್ಥ್ಯವನ್ನು 35 ಸಾವಿರ ಮೆಗಾವಾಟ್ಗೆ ಹೆಚ್ಚಿಸುವ ಗುರಿ ಇತ್ತು. ಈಗ ಅದನ್ನು 50 ಸಾವಿರ ಮೆಗಾವಾಟ್ ಸಾಮರ್ಥ್ಯಕ್ಕೆ ತಲುಪಿಸುವ ಗುರಿಯೊಂದಿಗೆ ಯೋಜನೆ ರೂಪಿಸುತ್ತಿದ್ದೇವೆ. ಈ ಸಂಬಂಧ ಏಪ್ರಿಲ್ನಲ್ಲೇ ಅಧ್ಯಯನ ನಡೆದಿದ್ದು, ರಾಜ್ಯದ ಉತ್ತರ, ದಕ್ಷಿಣ ಮತ್ತು ಕೇಂದ್ರ ಭಾಗದಲ್ಲಿ ಮೂರು 765 ಕೆ.ವಿ. ಸಾಮರ್ಥ್ಯದ ಉಪಕೇಂದ್ರಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ’ ಎಂದರು.

ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಎನ್. ಶಿವಶಂಕರ್ ಇದ್ದರು.

‘ಜೆಸಿಬಿ ಲಾರಿ ಸಂಚಾರದಿಂದ ಸಮಸ್ಯೆ ಇಲ್ಲವೇ?’

‘ಶರಾವತಿ ವಿದ್ಯುದಾಗರದಿಂದ ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಪಂಪ್ಡ್ ಸ್ಟೋರೇಜ್ ಅನುಷ್ಠಾನಗೊಂಡರೆ ಉತ್ಪಾದನೆ ಸಾಮರ್ಥ್ಯ ಮೂರು ಪಟ್ಟು ಅಂದರೆ 3 ಸಾವಿರ ಮೆಗಾವಾಟ್ ಆಗಲಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸುವುದು ಸರಿ ಅಲ್ಲ’ ಎಂದು ಕೆ.ಜೆ ಜಾರ್ಜ್ ಹೇಳಿದರು. ‘ಪಶ್ಚಿಮಘಟ್ಟ ಪ್ರದೇಶದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳುವುದರಿಂದ ಪಶ್ಚಿಮಘಟ್ಟ ಮತ್ತು ಅಲ್ಲಿನ ಪ್ರಾಣಿಗಳಿಗೆ ತೊಂದರೆ ಆಗುವುದಿಲ್ಲವೇ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ‘ಅಲ್ಲಿ ಜೆಸಿಬಿ ಮತ್ತು ಲಾರಿಗಳು ಸಂಚರಿಸುತ್ತವೆ. ಅದರಿಂದ ಅಲ್ಲಿನ ಪ್ರಾಣಿಗಳಿಗೆ ಸಮಸ್ಯೆ ಆಗುವುದಿಲ್ಲವೇ? ಯೋಜನೆಯಿಂದಲೇ ಸಮಸ್ಯೆ ಆಗುತ್ತದೆಯೇ? ಅಷ್ಟಕ್ಕೂ ಪೈಪ್ಲೈನ್ ಅಳವಡಿಕೆ ಸಂದರ್ಭದಲ್ಲಿ ಸ್ವಲ್ಪ ತೊಂದರೆ ಆಗಬಹುದು. ನಂತರ ಅದನ್ನು ಯಥಾಸ್ಥಿತಿಗೆ ತರಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.