ಬೆಂಗಳೂರು: ‘ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಸಂಪೂರ್ಣ ಕಾನೂನು ಬಾಹಿರವಾಗಿದೆ’ ಎಂದು ಆರೋಪಿಸಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ದಾಖಲಿಸಿರುವ ಖಾಸಗಿ ದೂರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ಪ್ರಾಥಮಿಕ ತನಿಖಾ ವರದಿ ತರಿಸಿಕೊಂಡು ಮುಂದುವರಿಯುವ ಬಗೆಗಿನ ಆದೇಶವನ್ನು ಜನಪ್ರತಿನಿಧಿಗಳ ಕೋರ್ಟ್ ಇದೇ 21ಕ್ಕೆ ಪ್ರಕಟಿಸಲಿದೆ.

‘ಈ ಟೆಂಡರ್ ನೀಡಿಕೆಯಿಂದ ಅಂದಾಜು ₹16 ಸಾವಿರ ಕೋಟಿ ಮೊತ್ತದ ದುರ್ಲಾಭ ಪಡೆಯಲಾಗುತ್ತಿದೆ’ ಎಂದು ಆರೋಪಿಸಿ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ಅಧ್ಯಕ್ಷರೂ ಆದ ಇಂಧನ ಸಚಿವ ಕೆ.ಜೆ.ಜಾರ್ಜ್ ಮತ್ತಿತರರ ವಿರುದ್ಧ ಬಿಜೆಪಿಯ ಶಾಸಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹಾಗೂ ಇತರರು ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ನಡೆಸಿತು.

ಫಿರ್ಯಾದುದಾರ ಬಿಜೆಪಿಯ ಶಾಸಕರಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಎಸ್.ಆರ್.ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಪರವಾಗಿ ಹೈಕೋರ್ಟ್ನ ಪದಾಂಕಿತ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿ, ‘ನಾವು ಸ್ಮಾರ್ಟ್ ಮೀಟರ್ ಅಳವಡಿಕೆ ಬೇಡ ಎಂದು ಹೇಳುತ್ತಿಲ್ಲ. ಆದರೆ, ಇದರ ಸಂಪೂರ್ಣ ಟೆಂಡರ್ ಪ್ರಕ್ರಿಯೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (ಕೆಇಆರ್ಸಿ) ಮಾರ್ಗಸೂಚಿಗಳಿಗೆ ಅನುಗುಣವಾಗಿ ಇಲ್ಲ’ ಎಂದು ಆಕ್ಷೇಪಿಸಿದರು.

ಈ ಸಂಬಂಧ ಸುದೀರ್ಘ ವಾದ ಆಲಿಸಿದ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು, ‘ದೂರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನಡೆಸಿರುವ ಪ್ರಾಥಮಿಕ ತನಿಖೆಯ ವರದಿಯನ್ನು ಪರಿಶೀಲಿಸಲಾಗುವುದು. ತದನಂತರ ಮುಂದಿನ ನ್ಯಾಯಿಕ ಪ್ರಕ್ರಿಯೆಯನ್ನು ನಿರ್ಣಯಿಸಲಾಗುವುದು’ ಎಂದು ತಿಳಿಸಿ ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಿದರು.

ದೂರಿನಲ್ಲಿ ಸಚಿವ ಕೆ.ಜೆ.ಜಾರ್ಜ್, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಸ್ಕಾಂನ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಎಚ್.ಜೆ.ರಮೇಶ್ ಅವರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ. ಫಿರ್ಯಾದುದಾರ ಪೈಕಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಮತ್ತು ‘ಬೆಂಗಳೂರು ವಕೀಲರ ಸಂಘ’ದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್ ನ್ಯಾಯಾಲಯದಲ್ಲಿ ಖುದ್ದು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.