ಹುಬ್ಬಳ್ಳಿ: ಹಾವೇರಿ ಜಿಲ್ಲೆ ರಟ್ಟಿಹಳ್ಳಿಯಲ್ಲಿ 14 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದ ಸಾಮಾಜಿಕ ಹೋರಾಟಗಾರ ಬಿ.ಡಿ. ಹಿರೇಮಠ ಅಸ್ವಸ್ಥಗೊಂಡಿದ್ದು ಅವರನ್ನು ಇಲ್ಲಿನ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿಕಾರಿಪುರ ತಾಲ್ಲೂಕಿನ ಉಡಗಣಿ, ತಾಳಗುಂದ ಕೆರೆ ತುಂಬಿಸುವ ನೀರಾವರಿ ಯೋಜನೆಗೆ ಪೈಪ್‌ಲೈನ್ ಅಳವಡಿಸಲು ರೈತರ ಜಮೀನುಗಳ ಸ್ವಾಧೀನ ವಿರೋಧಿಸಿ ರಟ್ಟಿಹಳ್ಳಿಯಲ್ಲಿ ರೈತರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಹಿರೇಮಠ ಅವರು ಈ ಹೋರಾಟದ ನೇತೃತ್ವ ವಹಿಸಿದ್ದರು. ಉಪವಾಸ ಮಾಡಿದ್ದರಿಂದ ತೀರಾ ಅಸ್ವಸ್ಥರಾಗಿದ್ದಾರೆ. ಆಸ್ಪತ್ರೆಯ ವಿಐಪಿ ವಾರ್ಡ್‌ನಲ್ಲಿ ಅವರನ್ನು ದಾಖಲಿಸಲಾಗಿದ್ದು, ವೈದ್ಯಕೀಯ ಸಿಬ್ಬಂದಿ ರಕ್ತ ಪರೀಕ್ಷೆ ಹಾಗೂ ಬಿಪಿ ತಪಾಸಣೆ ಮಾಡಿದ್ದಾರೆ.

‘ಪ್ರಜಾವಾಣಿ’ ಜೊತೆ ಮಾತನಾಡಿದ ಹಿರೇಮಠ ‘ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಆರೋಗ್ಯದಲ್ಲಿ ಬಹಳಷ್ಟು ಸಮಸ್ಯೆಯಾದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದೇನೆ. ವೈದ್ಯಕೀಯ ಸಿಬ್ಬಂದಿ ಪರೀಕ್ಷೆ ಮಾಡಿದ್ದಾರೆ. ಈಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದೇನೆ’ ಎಂದರು.

ಇದನ್ನೂ ಓದಿ:ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕ ಆರ್.ಎನ್. ಶೆಟ್ಟಿ ನಿಧನ

ಕಿಮ್ಸ್ ವೈದ್ಯಕೀಯ ಸಿಬ್ಬಂದಿ ಪ್ರತಿಕ್ರಿಯಿಸಿ ‘ಹಿರೇಮಠ ಅವರಿಗೆ ತೀವ್ರ ನಿಶಕ್ತಿಯಾಗಿದ್ದು, ಗ್ಲುಕೋಸ್ ನೀಡಲಾಗಿದೆ. 10.30ರ ಬಳಿಕ ವೈದ್ಯರು ಬಂದು ತಪಾಸಣೆ ಮಾಡಲಿದ್ದಾರೆ’ ಎಂದರು.

ಗೃಹಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಬುಧವಾರ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ತೆರಳಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರಿಂದ ಉಪವಾಸ ಸತ್ಯಾಗ್ರಹ ಕೈ ಬಿಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.