ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿನಿಯ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ

Published 27 ಜೂನ್ 2023, 16:26 IST
Last Updated 27 ಜೂನ್ 2023, 16:26 IST
ಅಕ್ಷರ ಗಾತ್ರ

ಕೊಪ್ಪಳ: ಸಾಮಾಜಿಕ ಕಳಕಳಿ ವ್ಯಕ್ತಪಡಿಸಿ ಇಲ್ಲಿನ ಮಾಸ್ತಿ ಪಬ್ಲಿಕ್ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಶ್ರೇಯಾಂಕ ವಿ.ಮೆಣಸಗಿ ಮುಖ್ಯಮಂತ್ರಿಗೆ ಬರೆದಿದ್ದ ಪತ್ರಕ್ಕೆ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿ ಉತ್ತರ ಬರೆದಿದ್ದಾರೆ.

ಶ್ರೇಯಾಂಕ ‘ನೀವು 2013ರಲ್ಲಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅನ್ನಭಾಗ್ಯ, ಶೂ ಭಾಗ್ಯ ಸೇರಿದಂತೆ ಹಲವು ಜನಪರ ಕಾರ್ಯಗಳನ್ನು ಮಾಡಿದ್ದೀರಿ. ಈ ಬಾರಿಯೂ ಹಿಂದಿನಂತೆಯೇ ಉತ್ತಮ ಆಡಳಿತ ನೀಡಬೇಕು’ ಎಂದು ಪತ್ರ ಬರೆದಿದ್ದಳು.

ವಿದ್ಯಾರ್ಥಿನಿಯ ಪತ್ರಕ್ಕೆ ಉತ್ತರ ಬರೆದಿರುವ ಮುಖ್ಯಮಂತ್ರಿ ‘ತಾವು ಬರೆದ ಅಭಿನಂದನಾ ಪತ್ರ ತಲುಪಿದೆ. ಇಂದಿನ ಮಕ್ಕಳೇ ನಾಳಿನ ರಾಷ್ಟ್ರ ನಿರ್ಮಾತೃಗಳು. 8ನೇ ತರಗತಿ ಓದುತ್ತಿರುವ ನಿನಗಿರುವ ಸಾಮಾಜಿಕ ಕಳಕಳಿ ಮೆಚ್ಚುವಂಥದ್ದು. ಈ ಎಳೆಯ ವಯಸ್ಸಿನಲ್ಲಿಯೇ ಬಡವರು, ದೀನದಲಿತರು ಹಾಗೂ ರೈತರ ಬಗ್ಗೆ ನಿನ್ನ ಕಾಳಜಿ ಬೆರಗು ಮೂಡಿಸುತ್ತದೆ. ಜೀವನದಲ್ಲಿ ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯೆ ಕಲಿತು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಮೂಲಕ ಇತರರಿಗೂ ಮಾದರಿಯಾಗು’ ಎಂದು ಹಾರೈಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT