ಬೆಂಗಳೂರು: ವಿಧಾನಸೌಧದ ಆವರಣಕ್ಕೆ ಇಡೀ ರಾತ್ರಿ ಬಂದಿಳಿದ ಹೊಸ ಬೈಕ್ಗಳು ಬೆಳಗಾಗುವಷ್ಟರಲ್ಲಿ ಸಾಲುಗಟ್ಟಿ ನಿಂತಿದ್ದವು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಮಾರಂಭ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜನೆಗೊಂಡಿತ್ತು. ಸಾಂಕೇತಿಕವಾಗಿ ಇಬ್ಬರು ಫಲಾನುಭವಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೈಕ್ ಕೀಲಿ ಹಸ್ತಾಂತರ ಮಾಡಿದರು.

ಬಳಿಕ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಏಳು ನಿಗಮಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 100 ಬೈಕ್ಗಳನ್ನು ವಿತರಿಸಲಾಗುತ್ತಿದೆ. ಇದರಿಂದ ವಿತರಣೆ(ಡೆಲಿವರಿ) ಕೆಲಸ ಮಾಡುವವರಿಗೆ, ಮನೆ ಮನೆಗೆ ಹಾಲು ಪೂರೈಸುವವರಿಗೆ ಅನುಕೂಲ ಆಗಲಿದೆ’ ಎಂದು ಹೇಳಿದರು.

‘ಈ ಸಮುದಾಯಗಳ ನೋವು ಗೊತ್ತಿರುವುದರಿಂದಲೇ ಅವರನ್ನು ಆರ್ಥಿಕವಾಗಿ ಮೇಲೆತ್ತಲು ಮೊದಲ ಬಾರಿಗೆ ಬೈಕ್ ವಿತರಿಸುವ ಯೋಜನೆ ರೂಪಿಸಿದ್ದೇವೆ’ ಎಂದರು.

‘75 ವರ್ಷಗಳ ನಂತರವೂ ಅಂಬೇಡ್ಕರ್ ಕನಸನ್ನು ಎಷ್ಟರಮಟ್ಟಿಗೆ ನನಸು ಮಾಡಿದ್ದೇವೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವ ಕಾಲವಿದು. ಪ್ರತಿ ಹತ್ತು ವರ್ಷಗಳಿಗೊಮ್ಮೆ ಪುನರ್ ವಿಮರ್ಶೆಯಾಗಬೇಕು. ಮೀಸಲಾತಿ ಮತ್ತು ಅದರ ಲಾಭ ಎಷ್ಟು ಜನರಿಗೆ ತಲುಪಿದೆ ಎಂಬುದರ ಕುರಿತು ಸಾಮಾಜಿಕ ಮೌಲ್ಯಮಾಪನ ಆಗಬೇಕಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

‘ಐಪಿಡಿ ಸಾಲಪ್ಪ ವರದಿಯನ್ನು ಅನುಷ್ಠಾನ ಮಾಡಲಾಗುವುದು ಎಂದು ಈ ಹಿಂದೆ ಆಡಳಿತ ನಡೆಸಿದವರು ಹೇಳಿಕೊಂಡೇ ಬಂದರು. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡಿದರೆ ಸಾಲದು, ಕಾರ್ಯರೂಪಕ್ಕೆ ತರುವ ಇಚ್ಛಾಶಕ್ತಿ ಬೇಕು. ಆ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ’ ಎಂದರು.

‘ಪೌರನೌಕರರಿಗೆ ಸಿಂಗಪುರ ಪ್ರವಾಸ’
‘300 ಪೌರಕಾರ್ಮಿಕರನ್ನು ಸಿಂಗಪುರ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ನಗರಗಳ ಸ್ವಚ್ಛತೆ ಕಾರ್ಯ ಹೇಗೆ ನಡೆಯುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಅವರಿಗೆ ಈ ಅವಕಾಶ ಕಲ್ಪಿಸಲಾಗುತ್ತಿದೆ’ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

‘13 ಸಾವಿರ ಪೌರಕಾರ್ಮಿಕರನ್ನು ಕಾಯಂ ಮಾಡಲಾಗಿದ್ದು, ಅವರನ್ನು ಇನ್ನು ಮುಂದೆ ಪೌರನೌಕರರು ಎಂದೇ ಕರೆಯಬೇಕು’ ಎಂದು ಮುಖ್ಯಮಂತ್ರಿ ತಿಳಿಸಿದರು.

ಗಂಗಾಕಲ್ಯಾಣ ಯೋಜನೆಯ ಅನುಷ್ಠಾನದಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ₹75 ಸಾವಿರವನ್ನು ಫಲಾನುಭವಿ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ.
-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.