ಬೆಂಗಳೂರು: ‘ಮೇಲ್ಜಾತಿಗಳನ್ನು ತುಳಿಯುವ ಸಲುವಾಗಿ ಜಾತಿವಾರು ಸಮೀಕ್ಷೆ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಸರ್ಕಾರ ತಕ್ಷಣವೇ ಈ ಸಮೀಕ್ಷೆಯನ್ನು ನಿಲ್ಲಿಸಬೇಕು’ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಆಗ್ರಹಿಸಿದರು.

ನಗರದಲ್ಲಿ ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ‘ಸಮೀಕ್ಷಕರು ನಮ್ಮ ಮನೆಗೂ ಬಂದಿದ್ದರು. ನನ್ನೊಬ್ಬನಿಂದ ಮಾಹಿತಿ ಪಡೆಯಲು 1 ಗಂಟೆ 4 ನಿಮಿಷ ಬೇಕಾಯಿತು. ತಾಂತ್ರಿಕ ಸಮಸ್ಯೆ ಒಂದೆಡೆಯಾದರೆ, ಅನಗತ್ಯವಾದ ಪ್ರಶ್ನೆಗಳು ಒಂದೆಡೆ. ಅಗತ್ಯವಿಲ್ಲದೆ ಪ್ರಶ್ನೆಗಳನ್ನು ಏಕೆ ಕೇಳುತ್ತಿದ್ದೀರಿ’ ಎಂದು ಪ್ರಶ್ನಿಸಿದರು.

‘ಮೇಲ್ಜಾತಿ ಅಥವಾ ಯಾವುದೋ ಜಾತಿಗಳನ್ನು ತುಳಿಯುವ ಸಲುವಾಗಿ ಇಷ್ಟೆಲ್ಲಾ ಅಸಹ್ಯಕರವಾದ ಸಮೀಕ್ಷೆಯನ್ನು ನಡೆಸುತ್ತಿದ್ದಾರೆ. ಸಮೀಕ್ಷೆ ಬಗ್ಗೆ ಅಧಿಕಾರಿಗಳಿಗೇ ಪೂರ್ಣ ಮಾಹಿತಿ ಇಲ್ಲ. ಇದು ಇನ್ನೊಂದು ಕಾಂತರಾಜ ಆಯೋಗದ ಸಮೀಕ್ಷೆಯಂತಾಗುತ್ತದೆ. ಈ ಎಲ್ಲ ಗೊಂದಲಗಳಿಗೆ ತೆರೆ ಎಳೆಯಬೇಕು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಅತ್ಯಂತ ಅವೈಜ್ಞಾನಿಕವಾಗಿ ಈ ಸಮೀಕ್ಷೆ ನಡೆಸಲಾಗುತ್ತಿದೆ. ಆರು ತಿಂಗಳು– ವರ್ಷವಾದರೂ ಸಮೀಕ್ಷೆ ಮುಗಿಯುವುದಿಲ್ಲ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.